ADVERTISEMENT

ಚಿತ್ರದುರ್ಗ | ಎರಡು ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಇಬ್ಬರು ಸಾವು, 14 ಜನರು ಗುಣಮುಖ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2020, 14:25 IST
Last Updated 24 ಆಗಸ್ಟ್ 2020, 14:25 IST
   

ಚಿತ್ರದುರ್ಗ: ಜಿಲ್ಲೆಯಲ್ಲಿ ಸೋಮವಾರ 29 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,004 ಕ್ಕೆ ಏರಿಕೆಯಾಗಿದೆ. ಒಂದೇ ದಿನ ಇಬ್ಬರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಸೋಮವಾರ 380 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ 3, ಹಿರಿಯೂರು 3, ಚಳ್ಳಕೆರೆ 12, ಹೊಸದುರ್ಗ 9, ಮೊಳಕಾಲ್ಮುರು ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ ತಲಾ 1 ಪ್ರಕರಣ ಬೆಳಕಿಗೆ ಬಂದಿವೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 14 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 40 ಜನರು ಕೋವಿಡ್‍ನಿಂದ ಮೃತಪಟ್ಟಿದ್ದರೆ. ಸೋಂಕಿತರ ಪೈಕಿ ಈಗಾಗಲೆ 1,520 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 450 ಸಕ್ರಿಯ ಪ್ರಕರಣಗಳು ಇವೆ.

ADVERTISEMENT

ಸದ್ಯ ಜಿಲ್ಲೆಯಲ್ಲಿ 516 ಕಂಟೈನ್‌ಮೆಂಟ್‌ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ 14,303 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 33,813 ಜನರ ಮಾದರಿ ಸಂಗ್ರಹಿಸಲಾಗಿದ್ದು, 29,777 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 1,645 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.