ADVERTISEMENT

ಚಿತ್ರದುರ್ಗ: 182 ಜನರಿಗೆ ಕೊರೊನಾ ಸೋಂಕು

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2020, 15:37 IST
Last Updated 8 ಅಕ್ಟೋಬರ್ 2020, 15:37 IST
   

ಚಿತ್ರದುರ್ಗ: ಜಿಲ್ಲೆಯಲ್ಲಿ ಗುರುವಾರ 182 ಜನರಿಗೆ ಕೊವೀಡ್‌ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8,292ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಜಿಲ್ಲಾ ಕೋವಿಡ್‌ ಆಸ್ಪತ್ರೆ ಹಾಗೂ ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 46 ಜನರು ಗುಣಮುಖರಾಗಿದ್ದಾರೆ. ಇವರನ್ನು ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಗುಣಮುಖರಾದ ಸಂಖ್ಯೆ 8,004ಕ್ಕೆ ಏರಿಕೆಯಾಗಿದೆ.

ಗುರುವಾರ 1,040 ಜನರ ಗಂಟಲು ಮತ್ತು ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 182 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಕೋವಿಡ್‌ನಿಂದ ಈವರೆಗೆ 39 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 781 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಸೋಂಕಿತರಿಗೆ ಸಂಬಂಧಿಸಿದಂತೆ 67,927 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. 64,277 ಜನರ ವರದಿ ನೆಗೆಟೀವ್ ಬಂದಿದೆ. ಇನ್ನೂ 127 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.