ADVERTISEMENT

ಚಿತ್ರದುರ್ಗ: 104 ಜನರಿಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 13:59 IST
Last Updated 23 ಅಕ್ಟೋಬರ್ 2020, 13:59 IST
   

ಚಿತ್ರದುರ್ಗ: ಜಿಲ್ಲೆಯಲ್ಲಿ ಶುಕ್ರವಾರ 104 ಜನರಿಗೆ ಕೋವಿಡ್‌ ದೃಢಪಟ್ಟಿದ್ದು, ಕೊರೊನಾ ಸೋಂಕಿತರ ಸಂಖ್ಯೆ 11,737ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಜಿಲ್ಲಾ ಕೋವಿಡ್‌ ಆಸ್ಪತ್ರೆ ಮತ್ತು ಕೋವಿಡ್‌ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ 127 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 10,890 ಏರಿದೆ. ಜಿಲ್ಲೆಯಲ್ಲಿ ಸದ್ಯ 791 ಸಕ್ರಿಯ ಪ್ರಕರಣಗಳಿವೆ.

ಶುಕ್ರವಾರ ಒಟ್ಟು 1,659 ಜನರ ಗಂಟಲು ಮತ್ತು ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. ಪರೀಕ್ಷೆಗೆ ಒಳಪಡಿಸಿದ ಮಾದಗಳಲ್ಲಿ 104 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಈವರೆಗೆ 56 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. 1,176 ಜನರ ವರದಿ ಬರುವುದು ಬಾಕಿ ಇದೆ. ಸೋಂಕಿತರಿಗೆ ಸಂಬಂಧಿಸಿದಂತೆ 89,698 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರೆಂದು ಗುರುತಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.