ADVERTISEMENT

ಹೊಳಲ್ಕೆರೆ: ಸಾಲಗಾರರ ಕಾಟ ತಾಳಲಾದೇ ಗೃಹಿಣಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2024, 14:19 IST
Last Updated 19 ಮಾರ್ಚ್ 2024, 14:19 IST
ರಂಜಿತಾ
ರಂಜಿತಾ   

ಹೊಳಲ್ಕೆರೆ: ಸಾಲಗಾರರ ಕಾಟ ತಾಳಲಾರದೇ ಮನನೊಂದ ಗೃಹಿಣಿಯೊಬ್ಬರು ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಟ್ಟಣದ ಬಸವ ಲೇಔಟ್ ನಿವಾಸಿ ರಂಜಿತಾ (23) ಆತ್ಮಹತ್ಯೆ ಮಾಡಿಕೊಂಡವರು.

ರಂಜಿತಾ ಐದು ವರ್ಷಗಳ ಹಿಂದೆ ದರ್ಶನ್ ಬಾಲು ಎಂಬುವರನ್ನು ಮದುವೆಯಾಗಿದ್ದರು. ದಂಪತಿಗೆ ನಾಲ್ಕು ವರ್ಷದ ಗಂಡು ಮಗು ಇದೆ. ಪತಿ ನೀರಾವರಿ ಇಲಾಖೆಯಲ್ಲಿ ಎಂಜಿನಿಯರ್ ಆಗಿ ಸರ್ಕಾರಿ ಕೆಲಸದಲ್ಲಿದ್ದರೂ, ಖಾಸಗಿ ವ್ಯಕ್ತಿಗಳಿಂದ ಸುಮಾರು ₹1 ಕೋಟಿಗೂ ಹೆಚ್ಚು ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಮೀಟರ್ ಬಡ್ಡಿ ಲೆಕ್ಕದಲ್ಲಿ ಸಾಲ ಮಾಡಿದ್ದು, ಸಾಲ ಕೊಟ್ಟವರು ಬಡ್ಡಿ ಹಾಗೂ ಅಸಲು ವಾಪಸ್ ಕೊಡುವಂತೆ ಪೀಡಿಸುತ್ತಿದ್ದರು ಎನ್ನಲಾಗಿದೆ.

ADVERTISEMENT

‘ಸಾಲ ಕೊಟ್ಟವರು ಹಣಕ್ಕಾಗಿ ಮನೆಯ ಹತ್ತಿರ ಬಂದು ಪತಿ, ಪತ್ನಿ ಇಬ್ಬರನ್ನೂ ಪೀಡಿಸುತ್ತಿದ್ದರು. ಇದರಿಂದ ಮನನೊಂದು ರಂಜಿತಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ನನ್ನ ಪತ್ನಿ ಸಾವಿಗೆ ಸಾಲ ಕೊಟ್ಟವರೇ ಕಾರಣ’ ಎಂದು ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.