ADVERTISEMENT

250 ಕೊರೊನಾ ಸೋಂಕಿತರು ಗುಣಮುಖ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2020, 14:36 IST
Last Updated 15 ಸೆಪ್ಟೆಂಬರ್ 2020, 14:36 IST

ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 250 ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ 4,061ಏರಿಕೆಯಾಗಿದೆ.

ಇದೇ ದಿನ ಜಿಲ್ಲೆಯಲ್ಲಿ 125 ಜನರಲ್ಲಿ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 5,356ಕ್ಕೆ ಏರಿಕೆಯಾಗಿದೆ.

ಮಂಗಳವಾರ1,262 ಜನರ ಗಂಟಲು, ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಪರೀಕ್ಷೆಯ ವರದಿಯಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ 62, ಚಳ್ಳಕೆರೆ 13, ಹಿರಿಯೂರು 5, ಹೊಸದುರ್ಗ 13, ಮೊಳಕಾಲ್ಮುರು 13 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 19 ಕೋವಿಡ್ ಪ್ರಕರಣ ದೃಢಪಟ್ಟಿವೆ.

ADVERTISEMENT

ಜಿಲ್ಲೆಯಲ್ಲಿ ಸದ್ಯ 1,260 ಸಕ್ರಿಯ ಪ್ರಕರಣಗಳು ಇವೆ. ಈವರೆಗೆ 34 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಒಟ್ಟು 1,196 ಕಂಟೈನ್‌ಮೆಂಟ್ ವಲಯಗಳಿವೆ. ಇನ್ನೂ 777 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.