ADVERTISEMENT

ಕೋವಿಡ್‌ ಸಕ್ರಿಯ ಪ್ರಕರಣ 247ಕ್ಕೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 14:34 IST
Last Updated 17 ನವೆಂಬರ್ 2020, 14:34 IST

ಚಿತ್ರದುರ್ಗ: ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಸೋಮವಾರ 62 ಹಾಗೂ ಮಂಗಳವಾರ 61 ಜನರು ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ 247ಕ್ಕೆ ಇಳಿಕೆಯಾಗಿದೆ.

ಸೋಮವಾರ 919 ಹಾಗೂ ಮಂಗಳವಾರ 1,495 ಜನರ ಗಂಟಲು ಹಾಗೂ ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಎರಡು ದಿನಗಳಲ್ಲಿ ಪರೀಕ್ಷೆಗೆ ಒಳಪಡಿಸಿದ ಮಾದರಿಗಳಲ್ಲಿ 24 ಜನರಲ್ಲಿ ಕೋವಿಡ್‌ ಇರುವುದು ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 13,133ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪೈಕಿ 12,821 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 64 ಜನರು ಮೃತಪಟ್ಟಿದ್ದಾರೆ. ಇನ್ನೂ 1,223 ಜನರ ಕೋವಿಡ್‌ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.