ADVERTISEMENT

ಶತಕ ದಾಟಿದ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 12:18 IST
Last Updated 20 ಏಪ್ರಿಲ್ 2021, 12:18 IST

ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 110 ಜನರಿಗೆ ಕೋವಿಡ್‌ ತಗುಲಿರುವುದು ಖಚಿತವಾಗಿದೆ. ಕಳೆದ ಆರು ತಿಂಗಳಲ್ಲಿಯೇ ಅತಿ ಹೆಚ್ಚು ಸಂಖ್ಯೆಯ ಕೋವಿಡ್‌ ಪ್ರಕರಣಗಳು ಬೆಳಕಿಗೆ ಬಂದಿವೆ. ಕೋವಿಡ್‌ ಪ್ರಕರಣಗಳ ಸಂಖ್ಯೆ 16,033 ಕ್ಕೆ ಏರಿಕೆಯಾಗಿದೆ.

ಮಂಗಳವಾರ 2,412 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. ಪರೀಕ್ಷೆಗೆ ಒಳಪಡಿಸಿದ ಮಾದರಿಗಳಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ 34, ಚಳ್ಳಕೆರೆ 19, ಹಿರಿಯೂರು 18, ಹೊಸದುರ್ಗ 16, ಮೊಳಕಾಲ್ಮುರು 8, ಹೊಳಲ್ಕೆರೆ ತಾಲ್ಲೂಕಿನಲ್ಲಿ 3 ಹಾಗೂ ಹೊರ ಜಿಲ್ಲೆಯ 12 ಪ್ರಕರಣಗಳು ಬೆಳಕಿಗೆ ಬಂದಿವೆ.

ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 11 ಜನರು ಚೇರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 15,444 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 519 ಸಕ್ರಿಯ ಪ್ರಕರಣಗಳು ಇವೆ. 70 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.