ADVERTISEMENT

ಕೋವಿಡ್ ಪರೀಕ್ಷೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 13:00 IST
Last Updated 19 ಜನವರಿ 2021, 13:00 IST

ಚಿತ್ರದುರ್ಗ: ಕೋವಿಡ್‌ ಲಸಿಕೆ ಅಭಿಯಾನ ಆರಂಭವಾದ ಬಳಿಕ ಕೊರೊನಾ ಸೋಂಕು ಪರೀಕ್ಷೆಯನ್ನು ಆರೋಗ್ಯ ಇಲಾಖೆ ಕಡಿಮೆ ಮಾಡಿದೆ. ಇದರಿಂದ ರೋಗ ಪತ್ತೆ ವಿಳಂಬವಾಗುತ್ತಿದೆ.

ಜಿಲ್ಲೆಯಲ್ಲಿ ನಿತ್ಯ ಸರಾಸರಿ ಎರಡು ಸಾವಿರ ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿ ಸಂಗ್ರಹಿಸಲು ಸರ್ಕಾರ ಗುರಿ ನಿಗದಿ ಮಾಡಿತ್ತು. ಪರೀಕ್ಷೆಗೆ ಅಗತ್ಯ ಸೌಲಭ್ಯವನ್ನು ಕಲ್ಪಿಸಲಾಗಿತ್ತು. ಲಸಿಕೆ ಹಾಕಲು ಗಮನ ಕೇಂದ್ರೀಕರಿಸಿದ್ದರಿಂದ ಸೋಂಕು ಪತ್ತೆ ಕಡಿಮೆಯಾಗಿದೆ.

ಮಂಗಳವಾರ 858 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. ಪರೀಕ್ಷೆಗೆ ಒಳಪಡಿಸಿದ ಮಾದರಿಗಳಲ್ಲಿ 21 ಜನರಲ್ಲಿ ಕೋವಿಡ್‌ ಇರುವುದು ಖಚಿತವಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 14,574ಕ್ಕೆ ಏರಿಕೆಯಾಗಿದೆ.

ADVERTISEMENT

ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಏಳು ಜನರು ಮಂಗಳವಾರ ಗುಣಮುಖರಾಗಿದ್ದಾರೆ. ಈವರೆಗೆ 14,399 ಜನರು ಸೋಂಕು ಮುಕ್ತರಾಗಿದ್ದು, ಜಿಲ್ಲೆಯಲ್ಲಿ 107 ಸಕ್ರಿಯ ಪ್ರಕರಣಗಳಿವೆ. 530 ಜನರ ವರದಿ ಬರುವುದು ಬಾಕಿ ಇದೆ. 68 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.