ADVERTISEMENT

ಚಿತ್ರದುರ್ಗ: ಶಾಸಕ ಜಿ.ಎಚ್.ತಿಪ್ಪಾರೆಡ್ಡಿಗೆ ಕೋವಿಡ್-19 ದೃಢ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2021, 17:27 IST
Last Updated 12 ಏಪ್ರಿಲ್ 2021, 17:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿತ್ರದುರ್ಗ: ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅವರಿಗೆ ಸೋಮವಾರ ಕೋವಿಡ್ ಧೃಡಪಟ್ಟಿದೆ. ಚಿಕಿತ್ಸೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೋಮವಾರ ರೋಗ ಲಕ್ಷಣಗಳು ಕಾಣಿಸಿಕೊಂಡ ಪರಿಣಾಮ ಗಂಟಲು ಹಾಗೂ ಮೂಗಿನ ದ್ರವದ ಮಾದರಿಯನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದ್ದು, ವೈದ್ಯರ ಸಲಹೆಯ ಮೇರೆಗೆ ರಾತ್ರಿ ಬೆಂಗಳೂರಿಗೆ ಕರೆದೊಯ್ಯಲಾಯಿತು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT