ADVERTISEMENT

122 ಜನರಿಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2021, 4:58 IST
Last Updated 28 ಏಪ್ರಿಲ್ 2021, 4:58 IST

ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 122 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16,859ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 60, ಹಿರಿಯೂರು 16, ಹೊಳಲ್ಕೆರೆ 11, ಹೊಸದುರ್ಗ 16, ಚಳ್ಳಕೆರೆ 8, ಮೊಳಕಾಲ್ಮುರು ತಾಲ್ಲೂಕಿನಲ್ಲಿ 5 ಹಾಗೂ ಹೊರ ಜಿಲ್ಲೆಯ 6 ಪ್ರಕರಣಗಳು ಪತ್ತೆಯಾಗಿವೆ. ಮಂಗಳವಾರ 2,308 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಸಂಗ್ರಹಿ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 98 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 15,882 ಜನರು ಸೋಂಕುಮುಕ್ತರಾಗಿದ್ದಾರೆ. ಇದುವರೆಗೆ 71 ಜನರು ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 906 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.