ADVERTISEMENT

ಸಕ್ರಿಯ ಕೋವಿಡ್‌ ಪ್ರಕರಣ 719ಕ್ಕೆ ಕುಸಿತ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 14:33 IST
Last Updated 5 ಅಕ್ಟೋಬರ್ 2020, 14:33 IST

ಚಿತ್ರದುರ್ಗ: ಜಿಲ್ಲೆಯಲ್ಲಿ ಬಹುದಿನಗಳ ಬಳಿಕ ಸಕ್ರಿಯ ಪ್ರಕರಣಗಳ ಸಂಖ್ಯೆ ಸಾವಿರ ಗಡಿಯೊಳಗೆ ಬಂದಿದೆ. 719 ಪ್ರಕರಣಗಳು ಮಾತ್ರ ಸಕ್ರಿಯವಾಗಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆ ಸೇರಿದಂತೆ ವಿವಿಧೆಡೆ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಸೋಮವಾರ 210 ಜನರಿಗೆ ಕೋವಿಡ್‌ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 7,693ಕ್ಕೆ ಏರಿಕೆಯಾಗಿದೆ. ಇದೇ ದಿನ 84 ರೋಗಿಗಳು ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಸೋಮವಾರ 590 ಜನರ ಗಂಟಲು ಮತ್ತು ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. ಪರೀಕ್ಷಾ ವರದಿಯಲ್ಲಿ 210 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇದುವರೆಗೆ 37 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ADVERTISEMENT

ಸೋಂಕಿತರ ಪೈಕಿ ಈಗಾಗಲೇ 7,467 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ 69,747 ಜನರ ಮಾದರಿ ಸಂಗ್ರಹಿಸಲಾಗಿದ್ದು, ಇದರಲ್ಲಿ 61,362 ಜನರ ವರದಿ ನೆಗೆಟೀವ್ ಬಂದಿದೆ. ಇನ್ನೂ 226 ಜನರ ವರದಿ ಬರುವುದು ಬಾಕಿ ಉಳಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.