ADVERTISEMENT

ಚಿತ್ರದುರ್ಗ ತಾಲ್ಲೂಕಿನಲ್ಲಿ ಸೋಂಕು ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 3:33 IST
Last Updated 20 ಏಪ್ರಿಲ್ 2021, 3:33 IST

ಚಿತ್ರದುರ್ಗ: ಜಿಲ್ಲೆಯಲ್ಲಿ ಸೋಮವಾರ 95 ಜನರಲ್ಲಿ ಕೋವಿಡ್‌ ದೃಢಪಟ್ಟಿದೆ. ಇದರಲ್ಲಿ 39 ಪ್ರಕರಣಗಳು ಚಿತ್ರದುರ್ಗ ತಾಲ್ಲೂಕಿನಲ್ಲೇ ಪತ್ತೆಯಾಗಿವೆ. ಕೊರೊನಾ ಸೋಂಕಿನ ಸಂಖ್ಯೆ ದಿನ ಕಳೆದಂತೆ ಏರಿಕೆ ಆಗುತ್ತಿದೆ.

ಜಿಲ್ಲೆಯಲ್ಲಿ ಸೋಮವಾರ1,672 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದೆ.ಚಳ್ಳಕೆರೆ 10, ಹಿರಿಯೂರು 17, ಹೊಳಲ್ಕೆರೆ 6, ಹೊಸದುರ್ಗ 11, ಮೊಳಕಾಲ್ಮುರು ತಾಲ್ಲೂಕಿನಲ್ಲಿ 3 ಹಾಗೂ ಹೊರ ಜಿಲ್ಲೆಯ 9 ಪ್ರಕರಣಗಳು ಖಚಿತವಾಗಿವೆ. ಇನ್ನೂ790 ಜನರ ವರದಿ ಬರುವುದು ಬಾಕಿ ಇದೆ.

ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 23 ಜನರು ಚೇತರಿಸಿಕೊಂಡಿದ್ದಾರೆ. ಸೋಂಕು ಕಾಣಿಸಿಕೊಂಡ15,923 ಜನರಲ್ಲಿ15,433 ಜನರು ಗುಣಮುಖರಾಗಿದ್ದಾರೆ. 70 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸದ್ಯ420 ಸಕ್ರಿಯ ಪ್ರಕರಣಗಳು ಇವೆ.

ADVERTISEMENT

ಸೋಂಕಿತರಿಗೆ ಸಂಬಂಧಿಸಿದಂತೆ ಈವರೆಗೆ 1,27,803 ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 3,90,917 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,73,499 ಜನರ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.