ADVERTISEMENT

ಒಂದೇ ದಿನ 98 ಜನ ಗುಣಮುಖ

24 ಜನರಿಗೆ ಕೋವಿಡ್‌ ದೃಢ, 837ಕ್ಕೆ ಏರಿದ ಸೋಂಕಿತರ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 15:24 IST
Last Updated 5 ಆಗಸ್ಟ್ 2020, 15:24 IST

ಚಿತ್ರದುರ್ಗ: ಜಿಲ್ಲೆಯ ಹಲವೆಡೆ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 98 ಜನ ಒಂದೇ ದಿನ ಗುಣಮುಖರಾಗಿ ಬಿಡುಗಡೆಯಾಗಿದ್ದು ಆಶಾಭಾವನೆ ಮೂಡಿಸಿದೆ. ಗುಣಮುಖರಾಗುವವರ ಪ್ರಮಾಣ ದಿನ ಕಳೆದಂತೆ ಏರಿಕೆಯಾಗುತ್ತಿದೆ.

ಈವರೆಗೆ ಒಟ್ಟು 472 ಜನರು ಗುಣಮುಖರಾಗಿದ್ದು, 349 ಸಕ್ರಿಯ ಪ್ರಕರಣಗಳಿವೆ. ಸೋಂಕಿತರಿಗಿಂತ ಗುಣಮುಖರಾಗುವ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರಲ್ಲಿ ಸಂತಸ ಮೂಡಿಸಿದೆ.

ಜಿಲ್ಲೆಯಲ್ಲಿ ಬುಧವಾರ 948 ಜನರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 24 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 837ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 8, ಹೊಳಲ್ಕೆರೆ 2, ಹಿರಿಯೂರು 6, ಚಳ್ಳಕೆರೆ 6, ಹೊಸದುರ್ಗ 1 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 1ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ADVERTISEMENT

349 ಸಕ್ರಿಯ ಪ್ರಕರಣಗಳಲ್ಲಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 70, ಭರಮಸಾಗರ10, ಧರ್ಮಪುರ 30, ಪರಶುರಾಂಪುರ12, ಬೆಲಗೂರು 12, ರಾಂಪುರ 8, ಮರಡಿಹಳ್ಳಿ 26, ನಾಯಕನಹಟ್ಟಿ 7, ಬಿ.ದುರ್ಗ- 9, ಚಿತ್ರದುರ್ಗದ ಜೆಎಂಐಟಿ ವೃತ್ತದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ 10 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೊಳಕಾಲ್ಮೂರಿನ ಆದರ್ಶ ಶಾಲೆಯಲ್ಲಿ 12, ಚಳ್ಳಕೆರೆ ಬಿಸಿಎಂ ಹಾಸ್ಟೆಲ್‍ನಲ್ಲಿ 31, ಹೊಸದುರ್ಗದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 12, ಹಿರಿಯೂರು ತಾಲ್ಲೂಕು ದೇವರಕೋಟ ಮೊರಾರ್ಜಿ ಶಾಲೆಯಲ್ಲಿ 5 ಜನರು ದಾಖಲಾಗಿದ್ದಾರೆ. 65 ಜನರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.