ADVERTISEMENT

ಕೊರೊನಾ ನಿಯಂತ್ರಣಕ್ಕೆ ಸಹಕಾರ ಅಗತ್ಯ: ಶಾಸಕ ಗೂಳಿಹಟ್ಟಿ ಶೇಖರ್

ನಾಗರಿಕರ ಸಭೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2021, 4:02 IST
Last Updated 24 ಏಪ್ರಿಲ್ 2021, 4:02 IST
ಹೊಸದುರ್ಗದ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ಶಾಸಕ ಗೂಳಿಹಟ್ಟಿ ಡಿ.ಶೇಖರ್ ಅಧ್ಯಕ್ಷತೆಯಲ್ಲಿ ಕೊರೊನಾ ಸೋಂಕು ನಿಯಂತ್ರಣ ಮಾರ್ಗಸೂಚಿ ಪಾಲನೆ ಕುರಿತ ನಾಗರಿಕರ ಸಭೆ ನಡೆಯಿತು.
ಹೊಸದುರ್ಗದ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ಶಾಸಕ ಗೂಳಿಹಟ್ಟಿ ಡಿ.ಶೇಖರ್ ಅಧ್ಯಕ್ಷತೆಯಲ್ಲಿ ಕೊರೊನಾ ಸೋಂಕು ನಿಯಂತ್ರಣ ಮಾರ್ಗಸೂಚಿ ಪಾಲನೆ ಕುರಿತ ನಾಗರಿಕರ ಸಭೆ ನಡೆಯಿತು.   

ಹೊಸದುರ್ಗ: ‘ಕೊರೊನಾ ಬಗ್ಗೆ ನಿರ್ಲಕ್ಷ್ಯ ಸಲ್ಲ. ತಾಲ್ಲೂಕಿನಲ್ಲಿ ಸೋಂಕು ನಿಯಂತ್ರಿಸಲು ಸರ್ಕಾರದ ಮಾರ್ಗಸೂಚಿಯನ್ನು ಸಾರ್ವಜನಿಕರು ಚಾಚು ತಪ್ಪದೇ ಪಾಲಿಸಬೇಕು’ ಎಂದು ಶಾಸಕ ಗೂಳಿಹಟ್ಟಿ ಶೇಖರ್ ಮನವಿ ಮಾಡಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೊರೊನಾ ಸೋಂಕು ನಿಯಂತ್ರಣ ಮಾರ್ಗಸೂಚಿ ಪಾಲನೆ ಕುರಿತ ನಾಗರಿಕರ ಸಭೆಯಲ್ಲಿ ಮಾತನಾಡಿದರು.

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿತರು ಹೆಚ್ಚಾಗುತ್ತಿರುವುದರಿಂದ ಕೆಲವು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಾಸಿಗೆ, ಆಮ್ಲಜನಕ ಸಿಗದದಂತಹ ಸ್ಥಿತಿ ನಿರ್ಮಾಣವಾಗಿದೆ. ಆದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೋವಿಡ್ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಅಗತ್ಯ ಕ್ರಮಕೈಗೊಂಡಿವೆ ಎಂದು ತಿಳಿಸಿದರು.

ADVERTISEMENT

ಪುರಸಭೆ ಅಧ್ಯಕ್ಷ ಎಂ.ಶ್ರೀನಿವಾಸ್, ‘ಜನರ ಹಿತ ಕಾಪಾಡುವ ಉದ್ದೇಶದಿಂದ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಅರೋಗ್ಯ ಕಾಪಾಡಿಕೊಳ್ಳಲು ಮಾರ್ಗಸೂಚಿ ನೆರವಾಗಲಿದೆ. ಕೊರೊನಾ ಸೋಂಕಿನಿಂದ ಜೀವ ರಕ್ಷಿಸಿಕೊಂಡಲ್ಲಿ ಮುಂದಿನ ದಿನದಲ್ಲಿ ಏನು ಬೇಕಾದರೂ ಸಂಪಾದಿಸಲು ಸಾಧ್ಯವಾಗುತ್ತದೆ. ಪಟ್ಟಣದಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಪರಿಣಾಮಕಾರಿಯಾಗಿ ಪಾಲಿಸಲು ವರ್ತಕರು ಸಹಕರಿಸಬೇಕು’ ಎಂದು ಮನವಿ ಮಾಡಿದರು.

ಪುರಸಭೆ ಉಪಾಧ್ಯಕ್ಷೆ ಜ್ಯೋತಿ, ಪ್ರಭಾರ ಮುಖ್ಯಾಧಿಕಾರಿ ರಾಧಾ, ಮಾಜಿ ಶಾಸಕ ಇಳ್ಕಲ್ ವಿಜಯಕುಮಾರ್, ತಹಶೀಲ್ದಾರ್ ವೈ.ತಿಪ್ಪೇಸ್ವಾಮಿ, ಸಿಪಿಐ ಫೈಜುಲ್ಲಾ, ಪಿಎಸ್‌ಐ ಶಿವಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.