ADVERTISEMENT

ಚಿತ್ರದುರ್ಗ: ಜಿಲ್ಲೆಯಲ್ಲಿ 781 ಸಕ್ರಿಯ ಪ್ರಕರಣ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2021, 4:03 IST
Last Updated 24 ಏಪ್ರಿಲ್ 2021, 4:03 IST
ಅಂಕಿಅಂಶ
ಅಂಕಿಅಂಶ   

ಚಿತ್ರದುರ್ಗ: ಜಿಲ್ಲೆಯಲ್ಲಿ ಶುಕ್ರವಾರ 140 ಜನರಲ್ಲಿ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 16,444ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸದ್ಯ 781 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಶುಕ್ರವಾರ 2,299 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 45, ಹೊಸದುರ್ಗ 32, ಹೊಳಲ್ಕೆರೆ 19, ಹಿರಿಯೂರು 16,ಮೊಳಕಾಲ್ಮುರು 15 ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿ 8 ಮತ್ತು ಹೊರ ಜಿಲ್ಲೆಯ 5 ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 66 ಜನರು ಚೇತರಿಸಿಕೊಂಡಿದ್ದಾರೆ. ಈವರೆಗೆ 15,593 ಜನರು ಗುಣಮುಖರಾಗಿದ್ದಾರೆ. 70 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. 1,007 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.