ADVERTISEMENT

ಚಿತ್ರದುರ್ಗ | 51 ಜನರಿಗೆ ಸೋಂಕು, 24 ಗುಣಮುಖ

ಕೋವಿಡ್‌ ರೋಗಿಗಳ ಸಂಖ್ಯೆ 1,213ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2020, 15:59 IST
Last Updated 11 ಆಗಸ್ಟ್ 2020, 15:59 IST

ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 51 ಜನರಿಗೆ ಕೋವಿಡ್‌ ದೃಢಪಟ್ಟಿದ್ದು, ಕೊರೊನಾ ಸೋಂಕಿತರ ಸಂಖ್ಯೆ 1,213 ಕ್ಕೆ ಏರಿಕೆಯಾಗಿದೆ. ಒಂದೇ ದಿನ 24 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಮಂಗಳವಾರ 1,125 ಜನರ ಗಂಟಲು ಮತ್ತು ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಪರೀಕ್ಷಾ ವರದಿಯಲ್ಲಿ 51 ಜನರಿಗೆ ಕೋವಿಡ್ ಇರುವುದು ಖಚಿತವಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 7 ಹೊಳಲ್ಕೆರೆ 5, ಹಿರಿಯೂರು 11, ಚಳ್ಳಕೆರೆ 21, ಹೊಸದುರ್ಗ 3 ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 4 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕೊರೊನಾ ಸೋಂಕಿತರಲ್ಲಿ 20 ಜನರು ಮೃತಪಟ್ಟಿದ್ದಾರೆ. ಈಗಾಗಲೇ 577 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 617 ಸಕ್ರಿಯ ಪ್ರಕರಣಗಳಿವೆ. ಒಟ್ಟು 302 ಕಂಟೈನ್‌ಮೆಂಟ್‌ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ 7,951 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಮಾಹಿತಿ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.