ಹಿರಿಯೂರು:ನಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದ್ವಿತೀಯ ದರ್ಜೆ ಗುಮಾಸ್ತರಾಗಿರುವ 32 ವರ್ಷದ ಮಹಿಳೆಗೆ ಸೋಮವಾರ ಕೋವಿಡ್–19 ದೃಢಪಟ್ಟಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ತಿಳಿಸಿದ್ದಾರೆ.
ಅವರು ನ್ಯಾಯಾಲಯದ ಕೆಲಸ ಮಾಡುವ ಪೊಲೀಸರ ಪ್ರಾಥಮಿಕ ಸಂಪರ್ಕ ಹೊಂದಿದ್ದರು.ಕೆಎಸ್‌ಆರ್‌ಟಿಸಿ ಬಸ್ ಚಾಲಕರಾಗಿರುವ ನಗರದ ಎಕೆ ಕಾಲೊನಿಯ 35 ವರ್ಷದ ವ್ಯಕ್ತಿಗೆ ಚಳ್ಳಕೆರೆಯ ಪಾಸಿಟಿವ್ ಇರುವ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದ್ದು, ಇಬ್ಬರನ್ನೂ ದೇವರಕೊಟ್ಟ ಗ್ರಾಮದ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆಗಸ್ಟ್ 1 ರಂದು ನಾಲ್ವರಿಗೆ, 2 ರಂದು ಐದು ಜನರಿಗೆ ಪಾಸಿಟಿವ್ ಬಂದಿದ್ದು, ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿರುವುದು ಆರೋಗ್ಯ ಇಲಾಖೆ ನೌಕರರಿಗೆ, ಸಾರ್ವಜನಿಕರಲ್ಲಿ ಸಮಾಧಾನ ತಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.