ಚಳ್ಳಕೆರೆ: ವಾಹನದಲ್ಲಿ ಅಳಡಿಸಿದ್ದ ಸಿಲಿಂಡರ್ ಭಾನುವಾರ ಆಕಸ್ಮಿಕವಾಗಿ ಸ್ಫೋಟಿಸಿದ ಕಾರಣ ಚಿತ್ರದುರ್ಗ ರಸ್ತೆ ವಿಠ್ಠಲನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಶಬ್ಬೀರ್ ಎಂಬುವವರ ಆಮ್ನಿ ವಾಹನ ಬೆಂಕಿಯಲ್ಲಿ ಹೊತ್ತಿ ಉರಿದಿದೆ.
ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಅಧಿಕಾರಿಗಳು, ವಾಹನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದರು.
ಸ್ಥಳ ಪರಿಶೀಲಿಸಿ ಈ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪಿಎಸ್‍ಐ ಮಂಜುನಾಥ ಅರ್ಜುನ ಲಿಂಗಾರೆಡ್ಡಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.