ADVERTISEMENT

ಚಳ್ಳಕೆರೆ | ಹೈನುಗಾರಿಕೆಯಿಂದ ಆರ್ಥಿಕ ಪ್ರಗತಿ ಸಾಧ್ಯ: ಟಿ.ರಘುಮೂರ್ತಿ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 7:31 IST
Last Updated 18 ಅಕ್ಟೋಬರ್ 2025, 7:31 IST
ಚಳ್ಳಕೆರೆ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಿರ್ಮಿಸಿದ್ದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಶಾಸಕ ಟಿ.ರಘುಮೂರ್ತಿ ಶಕ್ರವಾರ ಉದ್ಘಾಟಿಸಿದರು. ಶಿಮೂಲ್ ಹಾಲು ಉತ್ಪಾದಕ ಒಕ್ಕೂಟದ ಜಿಲ್ಲಾ ನಿರ್ದೇಶಕ ಬಿ.ಸಿ.ಸಂಜೀವಮೂರ್ತಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ ಇದ್ದರು.
ಚಳ್ಳಕೆರೆ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಿರ್ಮಿಸಿದ್ದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಶಾಸಕ ಟಿ.ರಘುಮೂರ್ತಿ ಶಕ್ರವಾರ ಉದ್ಘಾಟಿಸಿದರು. ಶಿಮೂಲ್ ಹಾಲು ಉತ್ಪಾದಕ ಒಕ್ಕೂಟದ ಜಿಲ್ಲಾ ನಿರ್ದೇಶಕ ಬಿ.ಸಿ.ಸಂಜೀವಮೂರ್ತಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ ಇದ್ದರು.   

ಚಳ್ಳಕೆರೆ: ‘ಹೈನುಗಾರಿಕೆಯಿಂದ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ. ಹೀಗಾಗಿ ರೈತರು ಕೃಷಿ ಚಟುವಟಿಕೆ ಜತೆಗೆ ದೇಸೀ ತಳಿ ಹಸು ಸಾಕಾಣಿಕೆ ಮಾಡುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು’ ಎಂದು ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು.

ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಶುಕ್ರವಾರ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

‘ಗ್ರಾಮೀಣ ಭಾಗದ ಮಹಿಳಾ ಸ್ವ– ಸಹಾಯ ಸಂಘದ ಪ್ರತಿನಿಧಿಗಳು, ಹಸು ಸಾಕಾಣಿಕೆ ತರಬೇತಿ ನೀಡುವುದಲ್ಲದೆ ಜನರಿಗೆ ಹೈನುಗಾರಿಕೆ ಮಹತ್ವವನ್ನು ತಪ್ಪದೇ ತಿಳಿಸಿಕೊಡಬೇಕು’ ಎಂದು ಹೇಳಿದರು.

ADVERTISEMENT

ಶಿವಮೊಗ್ಗ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾ ನಿರ್ದೇಶಕ ಬಿ.ಸಿ.ಸಂಜೀವಮೂರ್ತಿ ಮಾತನಾಡಿ, ‘ನಂದಿನ ಹಾಲಿನ ಸಿಹಿ ಉತ್ಪನ್ನಗಳನ್ನು ಬಳಕೆ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಹೆಚ್ಚು ಹೆಚ್ಚು ಹಸು ಸಾಕುವುದರಿಂದ ಶುದ್ಧ ಹಾಲಿನ ಜತೆಗೆ ಅದರ ಗಂಜಲು, ಸಗಣಿಯಿಂದ ಉತ್ತಮ ಬೆಳೆ ಬೆಳೆಯಲು ರೈತರಿಗೆ ಅನುಕೂಲವಾಗುತ್ತದೆ. ಗುಣಮಟ್ಟದ ಹಾಲು ನೀಡಿದರೆ ಉತ್ತಮ ಬೆಲೆ ದೊರೆಯುತ್ತದೆ’ ಎಂದು ಹೇಳಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ತಾಲ್ಲೂಕು ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಶಿಮೂಲ್ ಉಪಾಧ್ಯಕ್ಷ ಜಿ.ಪಿ.ರೇವಣಸಿದ್ದಪ್ಪ, ನಿರ್ದೇಶಕ ಬಿ.ಆರ್.ರವಿಕುಮಾರ್, ಜಿ.ಐ.ಶೇಖರಪ್ಪ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಮ್ಮ, ಮಾಜಿ ಅಧ್ಯಕ್ಷ ಪಾತಲಿಂಗಪ್ಪ, ಕೃಷಿ ಜಂಟಿ ನಿರ್ದೇಶಕ ಬಿ.ಮಂಜುನಾಥ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸ್.ಬಿ. ಚಿದಾನಂದಸ್ವಾಮಿ, ಗ್ರಾಮದ ಮುಖಂಡ ಚೇತನ್ ನಾಡಿಗರ್, ತಿಪ್ಪೇಸ್ವಾಮಿ, ಪ್ರಭು, ಮಂಜುನಾಥ್, ನಾಗರಾಜ ಇದ್ದರು.

ಚಳ್ಳಕೆರೆ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಿರ್ಮಿಸಿದ್ದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಶಾಸಕ ಟಿ.ರಘುಮೂರ್ತಿ ಶಕ್ರವಾರ ಉದ್ಘಾಟಿಸಿದರು. ಶಿಮೂಲ್ ಹಾಲು ಉತ್ಪಾದಕ ಒಕ್ಕೂಟದ ಜಿಲ್ಲಾ ನಿರ್ದೇಶಕ ಬಿ.ಸಿ.ಸಂಜೀವಮೂರ್ತಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.