ದಾವಣಗೆರೆ: ಸಾವಿರಾರು ವಿದ್ಯಾರ್ಥಿಗಳನ್ನು ಅಕ್ಷರ ಸಂಸ್ಕೃತಿಗೆ ಒಳಪಡಿಸಿದ ಕೀರ್ತಿ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಸಲ್ಲುತ್ತದೆ. ಅವರ ಸಮಾಜ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕು ಎಂದು ಚಿತ್ರದುರ್ಗದ ಬೃಹನ್ಮಠದ ಶಿವಮೂರ್ತಿ ಮುರುಘಾ ಶರಣರು ಒತ್ತಾಯಿಸಿದರು.
ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುರುಘಾ ಶರಣರು, ‘ಸಿದ್ದಗಂಗಾ ಶ್ರೀಗಳು ಜ್ಞಾನವೃದ್ಧರು, ವಯೋವೃದ್ಧರು ಇದ್ದಾರೆ. ಸಮಾಜಮುಖಿಯಾಗಿ ಬದುಕುತ್ತಿರುವ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು’ ಎಂದು ಆಗ್ರಹಿಸಿದರು.
ಇದನ್ನೂ ಓದಿ...ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಪ್ರಧಾನಿ, ರಾಷ್ಟ್ರಪತಿಗೆ ಮನವಿ: ಕುಮಾರಸ್ವಾಮಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.