ಚಿತ್ರದುರ್ಗ: ಐತಿಹಾಸಿಕ ಏಳುಸುತ್ತಿನ ಕೋಟೆ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ರೂಪಿಸಿದ ಆನ್‍ಲೈನ್ ಟಿಕೆಟ್ ವ್ಯವಸ್ಥೆ ರದ್ದುಪಡಿಸಬೇಕು ಎಂದು ಆಗ್ರಹಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ಕೋಟೆಯ ಎದುರು ಜಮಾಯಿಸಿದ ಪ್ರತಿಭಟನಕಾರರು ಇಂಗ್ಲಿಷ್ ನಾಮಫಲಕಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಕನ್ನಡ ಅಕ್ಷರ ಇರುವ ಟಿಕೆಟ್ ಮುದ್ರಿಸಿ ನೀಡಬೇಕು ಎಂದರು.
ಐತಿಹಾಸಿಕ ಕೋಟೆ, ಆಡುಮಲ್ಲೇಶ್ವರ, ಚಂದ್ರವಳ್ಳಿ, ಮುರುಘಾಮಠ, ವಿ.ವಿ.ಸಾಗರ, ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನ, ಹಾಲುರಾಮೇಶ್ವರ ಇನ್ನಿತರೆ ಪ್ರೇಕ್ಷಣೀಯ ಸ್ಥಳಗಳಿಗೆ ನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಕೋಟೆ ಟಿಕೆಟ್‌ಗೆ ಆನ್‍ಲೈನ್ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಿರುವುದು ಅವೈಜ್ಞಾನಿಕವಾಗಿದೆ. ಮೊಬೈಲ್ ಫೋನ್ ಇಲ್ಲದವರು ತೊಂದರೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರುನಾಡ ವಿಜಯಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ವೀಣಾ, ಮುಖಂಡರಾದ ರವಿ ಕುಮಾರನಾಯ್ಕ್, ಅವಿನಾಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.