ADVERTISEMENT

ವಿಧಾನ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ದೂರು ದಾಖಲಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಮೇ 2025, 13:20 IST
Last Updated 28 ಮೇ 2025, 13:20 IST
ಚಮನ್ ಷರೀಫ್
ಚಮನ್ ಷರೀಫ್   

ಹಿರಿಯೂರು: ಕಲಬುರಗಿ ಜಿಲ್ಲಾಧಿಕಾರಿ ಪೌಜಿಯಾ ತರನ್ನುಮ್ ಬಿ. ಅವರನ್ನು ಕುರಿತು ಪಾಕಿಸ್ತಾನದಿಂದ ಬಂದಿರುವವರು ಎಂದು ಅಸಂಬದ್ಧವಾಗಿ ಮಾತನಾಡಿರುವ ವಿಧಾನ ಪರಿಷತ್‌ ಸದಸ್ಯ ಎನ್.ರವಿಕುಮಾರ್ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಚಮನ್ ಷರೀಫ್ ಆಗ್ರಹಿಸಿದ್ದಾರೆ.

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ನಡೆದ ಪ್ರತಿಭಟನೆ ವೇಳೆ ದಕ್ಷ ಮಹಿಳಾ ಅಧಿಕಾರಿ ವಿರುದ್ಧ ಹಗುರವಾಗಿ ಮಾತನಾಡಿರುವುದು ರವಿಕುಮಾರ್‌ ಅವರ ಕೋಮುವಾದಿ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಸಂವಿಧಾನದ ಮೇಲೆ ಪ್ರಮಾಣ ಮಾಡಿ, ದೇಶದ ಜನರ ಸೇವೆಗೆ ಸಮರ್ಪಣೆಗೊಂಡು, ರಾಷ್ಟ್ರಪತಿ ಅವರಿಂದ ಪ್ರಶಸ್ತಿ ಪಡೆದಿರುವ ಅಧಿಕಾರಿಯನ್ನು ಧರ್ಮ ಮತ್ತು ಜಾತಿ ಹಿನ್ನೆಲೆಯಲ್ಲಿ ನಿಂದಿಸುವ ರಾಜಕಾರಣಿಗಳನ್ನು ಜನರು ತಿರಸ್ಕರಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.

ಇಡೀ ರಾಜ್ಯವೇ ಹೆಮ್ಮೆ ಪಡುವ ಮಹಿಳಾ ಜಿಲ್ಲಾಧಿಕಾರಿ ವಿರುದ್ಧ ಮಾತನಾಡಿರುವ ರವಿಕುಮಾರ್ ವಿರುದ್ಧ ಯಾವುದೇ ಶಿಸ್ತು ಕ್ರಮ ಕೈಗೊಳ್ಳದಿರುವ ಬಿಜೆಪಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಎಷ್ಟು ನಂಬಿಕೆ ಇಟ್ಟುಕೊಂಡಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ದ್ವೇಷ ಭಾಷಣ ಮಾಡಿರುವ ರವಿಕುಮಾರ್‌ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.