ಚಿಕ್ಕಜಾಜೂರು: ವಾರದಿಂದ ಸುರಿಯುತ್ತಿರುವ ಮಳೆ ಹಾಗೂ ಬಿರುಗಾಳಿಗೆ ಅರಸನಘಟ್ಟ ಗ್ರಾಮದ ವಿದ್ಯುತ್ ವಿತರಣಾ ಘಟಕದ ಸಮೀಪದಲ್ಲಿ ಮೂರ್ನಾಲ್ಕು ವಿದ್ಯುತ್ ಕಂಬಗಳು ಮರಗಳ ಮೇಲೆ ಉರುಳಿ ಬಿದ್ದಿದ್ದು, ದುರಸ್ತಿಗೆ ಕ್ರಮ ಕೈಗೊಂಡಿಲ್ಲ.
ರೈತರು ಜಾನುವಾರು ಮೇಯಿಸಲು ಹೋಗುತ್ತಿರುತ್ತಾರೆ. ಆಕಸ್ಮಿಕವಾಗಿ ವಿದ್ಯುತ್ ಅವಘಡ ಸಂಭವಿಸಿದರೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇದೆ. ಬೆಸ್ಕಾಂ ಎಂಜಿನಿಯರ್‌ಗಳು ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ ವಿದ್ಯುತ್ ಕಂಬಗಳನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.