ಚಿಕ್ಕಜಾಜೂರು: ‘ಡೆಂಗಿ ಬಗ್ಗೆ ಪ್ರತಿಯೊಬ್ಬರೂ ಎಚ್ಚರದಿಂದ ಇರಬೇಕು. ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಂಡರೆ ಡೆಂಗಿಯನ್ನು ನಿಯಂತ್ರಿಸಬಹುದು’ ಎಂದು ಆರೋಗ್ಯ ಇಲಾಖೆಯ ಜಿಲ್ಲಾ ಮೇಲ್ವಿಚಾರಕ ಅಶೋಕ್ ತಿಳಿಸಿದರು.
ಸಮೀಪದ ಹಿರೇಮ್ಮಿಗನೂರು ಗ್ರಾಮದಲ್ಲಿ ಬುಧವಾರ ನಡೆದ ಡೆಂಗಿ ನಿಯಂತ್ರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಮಳೆಗಾಲದಲ್ಲಿ ರಸ್ತೆ ಹಾಗೂ ಮನೆ ಸುತ್ತ ನೀರು ನಿಲ್ಲುವುದರಿಂದ ಲಾರ್ವಾ ಸೊಳ್ಳೆಗಳ ಸಂತತಿ ಬೆಳೆಯುತ್ತದೆ. ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ತ್ಯಾಜ್ಯವನ್ನು ದೂರ ಸಾಗಿಸಿದರೆ ಡೆಂಗಿಗೆ ಕಾರಣವಾಗುವ ಸೊಳ್ಳೆಗಳನ್ನು ನಿಯಂತ್ರಿಸಬಹುದು’ ಎಂದರು.
ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸುರೇಂದ್ರ ನಾಯ್ಕ, ಹಿರಿಯ ಆರೋಗ್ಯ ಸಹಾಯಕಿ ಅಶ್ವಿನಿ, ಕಿರಿಯ ಅರೋಗ್ಯ ಸಹಾಯಕಿಯರಾದ ರಮ್ಯಾ, ಆಶಾ ಮತ್ತು ವಿದ್ಯಾರ್ಥಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.