ADVERTISEMENT

ಹೆಚ್ಚುತ್ತಿರುವ ಡೆಂಗಿ; ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಡಾ.ವೆಂಕಟೇಶ್

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 14:18 IST
Last Updated 19 ಜುಲೈ 2024, 14:18 IST
ಹಿರಿಯೂರಿನ ನಗರದ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸಾರ್ವಜನಿಕ ಆಸ್ಪತ್ರೆ, ನಗರಸಭೆ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಲಾರ್ವ ಸೊಳ್ಳೆಗಳ ನಿಯಂತ್ರಣ ಚಟುವಟಿಕೆಗೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಚಾಲನೆ ನೀಡಿದರು.
ಹಿರಿಯೂರಿನ ನಗರದ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸಾರ್ವಜನಿಕ ಆಸ್ಪತ್ರೆ, ನಗರಸಭೆ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಲಾರ್ವ ಸೊಳ್ಳೆಗಳ ನಿಯಂತ್ರಣ ಚಟುವಟಿಕೆಗೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಚಾಲನೆ ನೀಡಿದರು.   

ಹಿರಿಯೂರು: ‘ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡೆಂಗಿಗೆ ಕಾರಣವಾದ ಸೊಳ್ಳೆಗಳು ಉತ್ಪತ್ತಿ ಆಗದಂತೆ ತಡೆಯಲು ಆರೋಗ್ಯ ಇಲಾಖೆ ಜೊತೆಗೆ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮನವಿ ಮಾಡಿದರು.

ನಗರದ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ, ಸಾರ್ವಜನಿಕ ಆಸ್ಪತ್ರೆ, ನಗರಸಭೆ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಲಾರ್ವ ಸೊಳ್ಳೆಗಳ ನಿಯಂತ್ರಣ ಚಟುವಟಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಮನೆಯ ತೊಟ್ಟಿ ಹಾಗೂ ನೀರು ಸಂಗ್ರಹಿಸುವ ತಾಣಗಳನ್ನು ಸದಾ ಸ್ವಚ್ಛವಾಗಿ ಇಡಬೇಕು. ಎಳನೀರು, ತಂಪು ಪಾನೀಯ ಸೇವಿಸಿದ ನಂತರ ಉಳಿದ ಅವಶೇಷಗಳನ್ನು ಎಲ್ಲೆಂದರಲ್ಲಿ ಬಿಸಾಡಿದರೆ ಅದರಲ್ಲಿ ಮಳೆಯ ನೀರು ಸೇರಿಕೊಂಡು ಸೊಳ್ಳೆಗಳು ಉತ್ಪತ್ತಿಯಾಗಲು ಕಾರಣವಾಗುತ್ತದೆ. ನಗರ ಪ್ರದೇಶದಲ್ಲಿ ಸಾರ್ವಜನಿಕರು ನಗರಸಭೆ ಸಿಬ್ಬಂದಿಯೊಂದಿಗೆ, ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಯೊಂದಿಗೆ ಸಹಕರಿಸಬೇಕು. ತೆಂಗಿನ ಚಿಪ್ಪು, ಪ್ಲಾಸ್ಟಿಕ್ ಚೀಲ, ಹಳೆಯ ಟಯರ್, ಬಾಟಲ್‌ಗಳಲ್ಲಿ ನೀರು ನಿಂತಿದ್ದರೆ ಸಾರ್ವಜನಿಕ ಹಿತದೃಷ್ಟಿಯಿಂದ ನೀರನ್ನು ಖಾಲಿ ಮಾಡಬೇಕು. ರಾತ್ರಿ ಮತ್ತು ಹಗಲು ವೇಳೆ ಮಲಗುವಾಗ ಸೊಳ್ಳೆ ಪರದೆ ಬಳಸಬೇಕು’ ಎಂದು ಅವರು ಮನವಿ ಮಾಡಿದರು.

ADVERTISEMENT

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ನಗರಸಭೆಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.