
ಧರ್ಮಪುರ: ವಿದ್ಯಾರ್ಥಿಗಳು ಸಂಸ್ಕಾರಯುತ ಜೀವನವನ್ನು ರೂಢಿಸಿಕೊಂಡು ಉನ್ನತ ವ್ಯಾಸಂಗದ ಕಡೆ ಗಮನ ಹರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಪದವಿಪೂರ್ವ ವಿಭಾಗದ ಉಪ ನಿರ್ದೇಶಕ ಕೆ.ತಿಮ್ಮಯ್ಯ ತಿಳಿಸಿದರು.
ಇಲ್ಲಿನ ಪಂಚಲಿಂಗೇಶ್ವರ ಪದವಿ ಪೂರ್ವ ಕಾಲೇಜಿಗೆ ಶುಕ್ರವಾರ ಭೇಟಿ ನೀಡಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಅವರು ಮಾತನಾಡಿದರು.
‘ಕಾಲೇಜು ಆವರಣದಲ್ಲಿ ಗುಟ್ಕಾ, ಬೀಡಿ, ಸಿಗರೇಟು ಸೇರಿದಂತೆ ಮಾದಕ ವಸ್ತುಗಳ ಸೇವನೆ ಅಥವಾ ಮಾರಾಟ ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಬೇಕು. ಕಾಲೇಜಿನಲ್ಲಿ ಮೂಲ ಸೌಕರ್ಯಗಳ ಕೊರತೆ ಕಂಡು ಬಂದರೆ ನನಗೆ ತಕ್ಷಣ ತಿಳಿಸಿ’ ಎಂದು ಸೂಚಿಸಿದರು.
ಧರ್ಮಪುರ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಪುಟ್ಟಸ್ವಾಮಿಗೌಡ, ಕಾರ್ಯದರ್ಶಿ ರಾಜಕುಮಾರ, ನಿರ್ದೇಶಕರಾದ ನರೇಂದ್ರಪ್ಪ, ಕೃಷ್ಣಮೂರ್ತಿ, ಪದವಿ ಕಾಲೇಜಿನ ಪ್ರಾಂಶುಪಾಲ ವಿ.ವೀರಣ್ಣ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಆರ್.ತಿಮ್ಮರಾಜು, ಮುಖ್ಯ ಶಿಕ್ಷಕ ಜೆ.ಮಂಜುನಾಥ್, ದುರ್ಗೇಶ್, ರಮೇಶ್, ತಿಮ್ಮರಾಯಪ್ಪ, ರವಿ, ಅವಿನಾಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.