ADVERTISEMENT

ವಿದ್ಯಾರ್ಥಿಗಳಿಗೆ ಭಾಷಾ ಕೌಶಲ ವೃದ್ಧಿಸಿ

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್‌ ಸಲಹೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2025, 16:20 IST
Last Updated 8 ಜೂನ್ 2025, 16:20 IST
ಚಿತ್ರದುರ್ಗದ ಡಯಟ್‌ನಲ್ಲಿ ಈಚೆಗೆ ಆಯೋಜಿಸಿದ್ದ ಡಿಆರ್‌ಜಿ ಸಭೆಯನ್ನು ಪ್ರಾಂಶುಪಾಲ ಎಂ.ನಾಸಿರುದ್ದೀನ್ ಉದ್ಘಾಟಿಸಿದರು
ಚಿತ್ರದುರ್ಗದ ಡಯಟ್‌ನಲ್ಲಿ ಈಚೆಗೆ ಆಯೋಜಿಸಿದ್ದ ಡಿಆರ್‌ಜಿ ಸಭೆಯನ್ನು ಪ್ರಾಂಶುಪಾಲ ಎಂ.ನಾಸಿರುದ್ದೀನ್ ಉದ್ಘಾಟಿಸಿದರು   

ಚಿತ್ರದುರ್ಗ: ‘ಜಿಲ್ಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ. ಅವರಿಗೆ ಭಾಷಾ ಕೌಶಲದ ಸಾಮರ್ಥ್ಯ ಬೆಳೆಸಿ ಸೂಕ್ತ ಪ್ರೋತ್ಸಾಹ ನೀಡಬೇಕು’ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್‌.ಮಂಜುನಾಥ್‌ ತಿಳಿಸಿದರು.

ಇಲ್ಲಿನ ಡಯಟ್‍ನಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಹಂತದ ಶೈಕ್ಷಣಿಕ ಅನುಷ್ಠಾನಾಧಿಕಾರಿಗಳಿಗೆ ಈಚೆಗೆ ಆಯೋಜಿಸಿದ್ದ ಡಿಆರ್‌ಜಿ ಸಭೆಯಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ವಿದ್ಯಾರ್ಥಿಗಳು ಶಿಕ್ಷಣದ ಮಹತ್ವ ತಿಳಿಸಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದಂತೆ ಗಮನ ನೀಡಬೇಕು’ ಎಂದರು.

‘ಎಸ್‌ಎಸ್‌ಎಲ್‌ಸಿ ಫಲಿತಾಂಶ ವೃದ್ಧಿಗೆ ಅನುಷ್ಠಾನಾಧಿಕಾರಿಗಳ ಪಾತ್ರ ಮುಖ್ಯವಾಗಿದೆ. ಶಾಲೆಗೆ ನಿಯಮಿತವಾಗಿ ಭೇಟಿ ನೀಡುವುದರ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಮಾರ್ಗದರ್ಶನ ಮಾಡಬೇಕು’ ಎಂದು ತಿಳಿಸಿದರು.

ADVERTISEMENT

‘ಭವಿಷ್ಯದ ಉತ್ತಮ ಪ್ರಜೆಗಳನ್ನು ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಪ್ರಾಥಮಿಕ ಹಂತದಿಂದಲೇ ಪರಿಣಾಮಕಾರಿಯಾಗಿ ಕಲಿಕಾ ಸಾಮರ್ಥ್ಯ ಹೆಚ್ಚಿಸಬೇಕು’ ಎಂದು ಡಯಟ್‌ ಪ್ರಾಂಶುಪಾಲ ಎಂ.ನಾಸಿರುದ್ದೀನ್‌ ಹೇಳಿದರು.

‘ಶಿಕ್ಷಕರ ಸಾಮರ್ಥ್ಯ ಅಭಿವೃದ್ಧಿಗೆ ಡಯಟ್‌ನಿಂದ ವಿಷಯವಾರು ತರಬೇತಿ ನೀಡಲಾಗುತ್ತಿದೆ. ತರಗತಿ ಕೋಣೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರ ಮೂಲಕ ಫಲಿತಾಂಶ ಹೆಚ್ಚಿಸಲು ಕಾರ್ಯೋನ್ಮುಖರಾಗಬೇಕು’ ಎಂದು ತಿಳಿಸಿದರು.

ಉಪ ಪ್ರಾಂಶುಪಾಲ ಅಶ್ವಥ್‌ ನಾರಾಯಣ, ಹಿರಿಯ ಉಪನ್ಯಾಸಕರಾದ ಪೂರ್ಣಿಮಾ, ಎಸ್‌.ಸಿ.ಪ್ರಸಾದ್‌, ತಿಪ್ಪೇಸ್ವಾಮಿ, ಜ್ಞಾನೇಶ್ವರಿ, ಡಿವೈಪಿಸಿ ವೆಂಕಟೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸೈಯದ್‌ ಮೋಸಿನ್‌, ನಾಗಭೂಷಣ್‌, ಸುರೇಶ್‌, ನಿರ್ಮಲಾದೇವಿ, ಉಪನ್ಯಾಸಕರಾದ ಆರ್‌.ನಾಗರಾಜು, ಎಸ್‌.ಬಸವರಾಜು, ಯು.ಸಿದ್ದೇಶಿ, ವಿ.ಕನಕಮ್ಮ, ಕೆ.ಎ.ಪದ್ಮ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.