ಚಿತ್ರದುರ್ಗ: ಶಿಕ್ಷಕರಿಗೆ ಒಳನೋಟ ಮುಖ್ಯವಾಗಿದ್ದು, ಮಕ್ಕಳ ಕಲಿಕಾ ಸಾಮರ್ಥ್ಯ ಅರಿತುಕೊಳ್ಳಲು ಸಹಾನುಭೂತಿ, ಸಂವೇದನಾಶೀಲತೆ ಗುಣ ಬೆಳೆಸಿಕೊಳ್ಳಬೇಕು ಎಂದು ಡಯಟ್ ಉಪನ್ಯಾಸಕ ಎಸ್.ಬಸವರಾಜು ಹೇಳಿದರು.
ಇಲ್ಲಿನ ಡಯಟ್‍ನಲ್ಲಿ ಸೋಮವಾರ ಹೊಸದುರ್ಗದ ಎಸ್‌ವಿಎಸ್ ಶಿಕ್ಷಣ ವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಗೆ ಆಯೋಜಿಸಿದ್ದ ಶೈಕ್ಷಣಿಕ ಚಟುವಟಿಕೆ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ‘ವೃತ್ತಿಪರ ಸಾಮರ್ಥ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು’ ಎಂದರು.
‘ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯ. ಹೊಸ ಚಿಂತನೆ, ಆಲೋಚನೆಯೊಂದಿಗೆ ನಾವೀನ್ಯಯುತ ಚಟುವಟಿಕೆ ಅಳವಡಿಸಿಕೊಂಡು ಬೋಧಿಸಬೇಕು. ತರಗತಿ ಕೋಣೆಯಲ್ಲಿ ವಿದ್ಯಾರ್ಥಿ ಸ್ನೇಹಿ ಕಲಿಕಾ ವಾತಾವರಣ ನಿರ್ಮಿಸಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ, ಜೀವನ ಮೌಲ್ಯ ಬೆಳೆಸಬೇಕು’ ಎಂದು ತಿಳಿಸಿದರು.
ಉಪನ್ಯಾಸಕರಾದ ವಿ.ಕನಕಮ್ಮ, ನಿತ್ಯಾನಂದ, ಗಿರೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.