ADVERTISEMENT

ಕಾರ್ಮಿಕರಿಗೆ ಊಟದ ವ್ಯವಸ್ಥೆ: ಭರವಸೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2020, 9:15 IST
Last Updated 2 ಏಪ್ರಿಲ್ 2020, 9:15 IST
ಟಿ. ರಘುಮೂರ್ತಿ
ಟಿ. ರಘುಮೂರ್ತಿ   

ಚಳ್ಳಕೆರೆ: ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಕೂಲಿ ಕೆಲಸ ನಿರ್ವಹಿಸುತ್ತಿದ್ದ ದಲ್ಲಾಲಿ ಹಾಗೂ ಕೂಲಿ ಕಾರ್ಮಿಕರಿಗೆ ದಾನಿಗಳಿಂದ ಊಟದ ವ್ಯವಸ್ಥೆ ಕಲ್ಪಿಸುವುದಾಗಿ ಶಾಸಕ ಟಿ.ರಘುಮೂರ್ತಿ ಭರವಸೆ ನೀಡಿದರು.

ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಬುಧವಾರ ನಡೆದ ಹಮಾಲಿ, ಕೂಲಿ ಕಾರ್ಮಿಕರ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮಾರುಕಟ್ಟೆಯ ವ್ಯಾಪಾರ ವಹಿವಾಟನ್ನು ಏ.5ರಿಂದ ಮಾರುಕಟ್ಟೆ ಆವರಣದಲ್ಲಿ ಎಂದಿನಂತೆ ಹುಣಸೆ ಹಣ್ಣು ಮತ್ತು ಒಣ ಮೆಣಸಿನಕಾಯಿ ಮಾರಾಟ ನಡೆಯಲಿದೆ ಎಂದು ಹೇಳಿದರು.

ADVERTISEMENT

15 ದಿನಗಳಿಂದ ಕೂಲಿ ಕೆಲಸ ಇಲ್ಲ. ಇದರಿಂದ ಹಮಾಲಿ ಕಾರ್ಮಿಕರ ಜೀವನ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಆದ್ದರಿಂದ ಕೂಲಿ ಕಾರ್ಮಿಕರಿಗೆ ಊಟದ ವ್ಯವಸ್ಥೆ ಕಲ್ಪಿಸಿ ಎಂದು ಹಮಾಲಿ ಸಂಘಟನೆಯ ಮುಖಂಡ ಕೆ.ವೀರಭದ್ರಪ್ಪ ಮನವಿ ಮಾಡಿದರು.

ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ, ಎಪಿಎಂಸಿ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಶ್ರೀನಿವಾಸರೆಡ್ಡಿ, ನಗರಸಭೆ ಪೌರಾಯುಕ್ತ ಪಾಲಯ್ಯ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಶ್ರೀಧರಬಾರಕೇರ, ಪಶುವೈದ್ಯರಾದ ರವಿ, ಕಾರ್ಮಿಕ ಇಲಾಖೆ ನಿರೀಕ್ಷಕ ಶಫಿಉಲ್ಲಾ, ಹಮಾಲಿ ಕಾರ್ಮಿಕರ ಸಂಘಟನೆಯ ಕಾರ್ಯದರ್ಶಿ ಟಿ.ತಿಪ್ಪೇಸ್ವಾಮಿ, ನಾಗರಾಜ, ನಿಂಗಣ್ಣ, ಓಬಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.