ADVERTISEMENT

ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ದೂರು

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 5:18 IST
Last Updated 23 ಏಪ್ರಿಲ್ 2021, 5:18 IST
ಸಿರಿಗೆರೆಯಲ್ಲಿ ಗುರುವಾರ ಕಲ್ಲೇಶ್ವರಸ್ವಾಮಿ ರಥೋತ್ಸವ ಅಂಗವಾಗಿ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಲಾಯಿತು
ಸಿರಿಗೆರೆಯಲ್ಲಿ ಗುರುವಾರ ಕಲ್ಲೇಶ್ವರಸ್ವಾಮಿ ರಥೋತ್ಸವ ಅಂಗವಾಗಿ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಲಾಯಿತು   

ಹಿರಿಯೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆಯರಬಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಂದಿಕೆರೆ ಜಗದೀಶ್ ಎಂಬುವರ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಳ್ಳಕೆರೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರ ವಿಚಾರಣೆಗೆ ಪೊಲೀಸರು ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಪೊಲೀಸರಿಗೆ ಬೆದರಿಕೆ ಹಾಕಿದ್ದು, ಹಲ್ಲೆ ನಡೆಸಲಾಗಿದೆ ಎಂದು ಎಎಸ್‌ಐ ದೊಡ್ಡತಿಪ್ಪಯ್ಯ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT