ADVERTISEMENT

ಸೆ.8ಕ್ಕೆ ಚಿತ್ರದುರ್ಗದಲ್ಲಿ ವಿತರಕರ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 29 ಮೇ 2024, 23:36 IST
Last Updated 29 ಮೇ 2024, 23:36 IST
   

ಚಿತ್ರದುರ್ಗ: ‘ರಾಜ್ಯಮಟ್ಟದ ಪತ್ರಿಕಾ ವಿತರಕರ ಸಮ್ಮೇಳನವನ್ನು ಸೆ.8ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾ ಗುತ್ತಿದೆ’ ಎಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕೆ.ಶಂಭುಲಿಂಗ ತಿಳಿಸಿದರು.

‘ನಾಲ್ಕನೇ ಸಮ್ಮೇಳನವನ್ನು ಚಿತ್ರದುರ್ಗದಲ್ಲಿ ನಡೆಸಲು ನಿಮ್ಮೆಲ್ಲರ ಸಹಕಾರ ಅಗತ್ಯ’ ಎಂದು ಬುಧವಾರ ಆಯೋಜಿಸಿದ್ದ ಸಮ್ಮೇಳನದ ಪೂರ್ವ ಭಾವಿ ಸಭೆಯಲ್ಲಿ ಮನವಿ ಮಾಡಿದರು.

ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಹುಬ್ಬಳ್ಳಿ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಳಗಾವಿ, ಶಿಗ್ಗಾವಿ, ಚನ್ನರಾಯಪಟ್ಟಣ, ವಿಜಯಪುರ, ಹರಿಹರ, ತುಮಕೂರು, ಬೆಂಗಳೂರಿನ ಗಾಂಧಿನಗರ, ವಿಜಯನಗರದ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.‌ 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.