
ಪ್ರಜಾವಾಣಿ ವಾರ್ತೆ
ನಾಯಿ
ಮೊಳಕಾಲ್ಮುರು: ತಾಲ್ಲೂಕಿನ ದೇವಸಮುದ್ರ ಹೋಬಳಿಯ ತಿಮ್ಮಲಾಪುರದ ಮುಖ್ಯರಸ್ತೆಯಲ್ಲಿ ಶುಕ್ರವಾರ ಹುಚ್ಚು ನಾಯಿ ಕಡಿದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಅದೇ ಗ್ರಾಮದ ಮೇಘನಾಥ್, ಶಿವಕುಮಾರ್, ಹಂಪಣ್ಣ, ಹನುಮಂತಪ್ಪ ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಇವರನ್ನು ಚಿಕಿತ್ಸೆಗಾಗಿ ರಾಂಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.