ADVERTISEMENT

ಮಾನವತಾವಾದಿ ಶ್ರೇಷ್ಠ ಚಿಂತಕ ಅಂಬೇಡ್ಕರ್

​ಪ್ರಜಾವಾಣಿ ವಾರ್ತೆ
Published 1 ಮೇ 2025, 13:15 IST
Last Updated 1 ಮೇ 2025, 13:15 IST
ನಾಯಕನಹಟ್ಟಿ ಹೋಬಳಿಯ ಎನ್.ಉಪ್ಪಾರಹಟ್ಟಿ ಗ್ರಾಮದಲ್ಲಿ ಬುಧವಾರ ನಡೆದ ಅಂಬೇಡ್ಕರ್ ಜಯಂತಿ ಪ್ರಯುಕ್ತ ಗ್ರಾಮದ ಯುವತಿಯರು ಪೂರ್ಣಕುಂಭ ಮೆರವಣಿಗೆ ನಡೆಸಿದರು
ನಾಯಕನಹಟ್ಟಿ ಹೋಬಳಿಯ ಎನ್.ಉಪ್ಪಾರಹಟ್ಟಿ ಗ್ರಾಮದಲ್ಲಿ ಬುಧವಾರ ನಡೆದ ಅಂಬೇಡ್ಕರ್ ಜಯಂತಿ ಪ್ರಯುಕ್ತ ಗ್ರಾಮದ ಯುವತಿಯರು ಪೂರ್ಣಕುಂಭ ಮೆರವಣಿಗೆ ನಡೆಸಿದರು    

ನಾಯಕನಹಟ್ಟಿ: ಡಾ.ಬಿ.ಆರ್.ಅಂಬೇಡ್ಕರ್ ಅವರು ಮಾನವತಾವಾದಿ ಶ್ರೇಷ್ಠ ಚಿಂತಕ ಎಂದು ನಿವೃತ್ತ ತಹಶೀಲ್ದಾರ್ ಎನ್.ರಘುಮೂರ್ತಿ ಅಭಿಪ್ರಾಯಪಟ್ಟರು.

ಹೋಬಳಿಯ ಎನ್.ಉಪ್ಪಾರಹಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ನೂತನವಾಗಿ ನಿರ್ಮಿಸಿರುವ ಅಂಬೇಡ್ಕರ್ ವೃತ್ತವನ್ನು ಉದ್ಘಾಟಿಸಿ ಅವರು ಮತಾನಾಡಿದರು.

ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ ಭಾರತ. ಇಂತಹ ಬೃಹತ್ ರಾಷ್ಟ್ರಕ್ಕೆ ಅಂಬೇಡ್ಕರ್‌ ಅವರು ಸಂವಿಧಾನವನ್ನು ರಚಿಸುವ ಮೂಲಕ ವಿಶ್ವಕ್ಕೆ ಮಾದರಿ ವ್ಯಕ್ತಿಯಾದರು ಎಂದು ಹೇಳಿದರು.

ADVERTISEMENT

ಮುಖಂಡರಾದ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ, ಎಂ.ವೈ.ಟಿ.ಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ಜೆ.ಮಲ್ಲಿಕಾರ್ಜುನ, ಗ್ರಾಮಸ್ಥರಾದ ಕೆ.ಬಿ.ತಿಪ್ಪೇಸ್ವಾಮಿ, ದುರುಗೇಶ, ಕೃಷ್ಣಪ್ಪ, ಬಂಗಾರಪ್ಪ, ಬೋಸಯ್ಯ, ಬಸವರಾಜ್, ಗೋವಿಂದಪ್ಪ, ವಸಂತ, ಮಂಜು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.