ADVERTISEMENT

ಸಂಚಾರಿ ಆರೋಗ್ಯ ಕ್ಲಿನಿಕ್ ಸೇವೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2022, 4:16 IST
Last Updated 5 ಜುಲೈ 2022, 4:16 IST
ಚಿತ್ರದುರ್ಗ ಪ್ರವಾಸಿ ಮಂದಿರದ ಆವರಣದಲ್ಲಿ ಶ್ರಮಿಕ್‌ ಸಂಜೀವಿನಿ-ಸಂಚಾರಿ ಆರೋಗ್ಯ ಕ್ಲಿನಿಕ್‌ ಸೇವೆಯ ವಾಹನಕ್ಕೆ ಸೋಮವಾರ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಹಸಿರು ನಿಶಾನೆ ತೋರಿದರು. ಕಾರ್ಮಿಕ ನಿರೀಕ್ಷಕ ರಾಜಣ್ಣ, ವಿಷಯ ನಿರ್ವಾಹಕ ತೀರ್ಥಪ್ರಸಾದ್‌, ಡಾ.ಬಸವ ಕಿರಣ ಇದ್ದಾರೆ.
ಚಿತ್ರದುರ್ಗ ಪ್ರವಾಸಿ ಮಂದಿರದ ಆವರಣದಲ್ಲಿ ಶ್ರಮಿಕ್‌ ಸಂಜೀವಿನಿ-ಸಂಚಾರಿ ಆರೋಗ್ಯ ಕ್ಲಿನಿಕ್‌ ಸೇವೆಯ ವಾಹನಕ್ಕೆ ಸೋಮವಾರ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಹಸಿರು ನಿಶಾನೆ ತೋರಿದರು. ಕಾರ್ಮಿಕ ನಿರೀಕ್ಷಕ ರಾಜಣ್ಣ, ವಿಷಯ ನಿರ್ವಾಹಕ ತೀರ್ಥಪ್ರಸಾದ್‌, ಡಾ.ಬಸವ ಕಿರಣ ಇದ್ದಾರೆ.   

ಚಿತ್ರದುರ್ಗ: ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಸೋಮವಾರ ಶ್ರಮಿಕ್‌ ಸಂಜೀವಿನಿ-ಸಂಚಾರಿ ಆರೋಗ್ಯ ಕ್ಲಿನಿಕ್‌ ಸೇವೆಯ ವಾಹನಕ್ಕೆ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಹಸಿರು ನಿಶಾನೆ ತೋರಿದರು.

‘ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಬಿತರ ಆರೋಗ್ಯ ಸೇವೆಗೆ ಸಂಚಾರಿ ಆರೋಗ್ಯ ಕ್ಲಿನಿಕ್ ಅತ್ಯಾಧುನಿಕ ಸವಲತ್ತುಗಳನ್ನು ಹೊಂದಿದೆ. ಈ ವಾಹನವು ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಗ್ರಾಮಗಳಲ್ಲಿ ಸಂಚರಿಸಿ ಕಾರ್ಮಿಕರಿಗೆ ಆರೋಗ್ಯ ಸೇವೆ ನೀಡಲಿದೆ’ ಎಂದು ಶಾಸಕರು ತಿಳಿಸಿದರು.

‘ಸಂಚಾರಿ ಆರೋಗ್ಯ ಕ್ಲಿನಿಕ್ ಅತ್ಯಾಧುನಿಕ ಸವಲತ್ತುಗಳನ್ನು ಹೊಂದಿದೆ. ಆಧುನಿಕ ಸ್ಟ್ರೆಚ್ಚರ್‌, ಬೆಡ್‌, ಆಕ್ಸಿಜನ್‌ ಪರಿಕರಗಳು, ವ್ಹೀಲ್‌ಚೇರ್‌, ಪ್ರಯೋಗಾಲಯ ಸಲಕರಣೆಗಳನ್ನು ಹೊಂದಿದೆ. ಓರ್ವ ವೈದ್ಯ, ನರ್ಸ್‌, ಫಾರ್ಮಸಿಸ್ಟ್‌, ಲ್ಯಾಬ್‌ ಟೆಕ್ನಿಷಿಯನ್‌, ಎಎನ್‌ಎಮ್‌, ಚಾಲಕ ಮತ್ತು ಸಹಾಯಕ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ’ ಎಂದರು.

ADVERTISEMENT

ಸಂಚಾರಿ ಆರೋಗ್ಯ ಕ್ಲಿನಿಕ್‌ಮ ವೈದ್ಯ ಡಾ.ಬಸವ ಕಿರಣ ಮಾತನಾಡಿ, ‘ಪ್ರಾಥಮಿಕ ಆರೋಗ್ಯ ಸೇವಾ ಕೇಂದ್ರದ ವ್ಯಾಪ್ತಿಯಲ್ಲಿರುವಂತಹ ಎಲ್ಲ ಆರೋಗ್ಯ ಸೇವೆಗಳು ಸಂಚಾರಿ ಆರೋಗ್ಯ ಕ್ಲಿನಿಕ್ ಮೂಲಕ ಸೇವೆ ನೀಡಲಾಗುವುದು’ ಎಂದು ಹೇಳಿದರು.

ಕಾರ್ಮಿಕ ನಿರೀಕ್ಷಕ ರಾಜಣ್ಣ, ವಿಷಯ ನಿರ್ವಾಹಕ ತೀರ್ಥಪ್ರಸಾದ್‌, ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.