ADVERTISEMENT

ಚಿತ್ರದುರ್ಗ: ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2025, 14:25 IST
Last Updated 15 ಏಪ್ರಿಲ್ 2025, 14:25 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಚಿಕ್ಕಜಾಜೂರು: ಕಾಲುಜಾರಿ ಕೃಷಿ ಹೊಂಡದಲ್ಲಿ ಬಿದ್ದು ಮಂಗಳವಾರ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ.

ADVERTISEMENT

ಚಿತ್ರದುರ್ಗ ತಾಲ್ಲೂಕಿನ ಲಕ್ಷ್ಮೀಸಾಗರದ ಮೈನಾ (9) ಮೃತ ಬಾಲಕಿ.

ಬಾಲಕಿ ತಾಯಿ ಶಾಂತಮ್ಮ ತಮ್ಮ ಅಕ್ಕನ ಊರಾದ ಬಿ.ದುರ್ಗ ಗ್ರಾಮಕ್ಕೆ ಜಾತ್ರೆಗಾಗಿ ವಾರದ ಹಿಂದೆ ಬಂದಿದ್ದರು. ಮಂಗಳವಾರ ಮಧ್ಯಾಹ್ನ ಅಕ್ಕನ ಇಬ್ಬರು ಮಕ್ಕಳು ಹಾಗೂ ಮೃತ ಬಾಲಕಿ ಮೈನಾ, ಅವಳ ಅಕ್ಕ ಲಕ್ಷ್ಮಿ ಅವರು ತೋಟಕ್ಕೆ ಹೋಗಿದ್ದರು. ತೋಟದಲ್ಲಿನ ಕೃಷಿ ಹೊಂಡದ ಬಳಿ ಆಟವಾಡುತ್ತಿದ್ದಾಗ ಮೈನಾ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದಿದ್ದಾಳೆ.

ಸಂಬಂಧಿಕರು ಬಾಲಕಿಯನ್ನು ನೀರಿನಿಂದ ಎತ್ತಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆ ಮೇರೆಗೆ ಹೊಳಲ್ಕೆರೆ ಆಸ್ಪತ್ರೆಗೆ ಕರೆದೊಯ್ದರು. ಈ ವೇಳೆ ಬಾಲಕಿ ಮೃತ ಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಸಂಬಂಧ ಚಿಕ್ಕಜಾಜೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.