ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
ಚಿತ್ರದುರ್ಗ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ) ಅವರ ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ)ದ ಅಧಿಕಾರಿಗಳು ಗುರುವಾರ ಪರಿಶೀಲಿಸಿದರು.
ವೀರೇಂದ್ರ ಅವರ ಹುಟ್ಟೂರು ಚಳ್ಳಕೆರೆ ನಗರದಲ್ಲಿರುವ ಫೆಡರಲ್ ಬ್ಯಾಂಕ್ ಹಾಗೂ ಕೋಟಕ್ ಮಹೀಂದ್ರ ಬ್ಯಾಂಕ್ ಶಾಖೆಗೆ ಮೂವರು ಅಧಿಕಾರಿಗಳು ತೆರಳಿ ವ್ಯವಹಾರದ ವಿವರ ಪಡೆದರು ಎಂದು ಮೂಲಗಳು ತಿಳಿಸಿವೆ.
ಬೆಳಿಗ್ಗೆ 10.30ಕ್ಕೆ ಪರಿಶೀಲನೆ ಆರಂಭಿಸಿದ ಇ.ಡಿ ಅಧಿಕಾರಿಗಳು ಮಧ್ಯಾಹ್ನದವರೆಗೂ ತಪಾಸಣೆ ನಡೆಸಿದರು. ಬ್ಯಾಂಕ್ ಶಾಖೆಯ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.