
ಹಿರಿಯೂರು: ‘ನಾನು ಬಿಜೆಪಿ ಶಾಸಕಿಯಾಗಿದ್ದ ಸಂದರ್ಭದಲ್ಲಿ ನನ್ನೊಂದಿಗೆ ಇದ್ದ ಬಹಳಷ್ಟು ಕಾರ್ಯಕರ್ತರು ಈಗ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಇದರಿಂದ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರಿಗೆ ಮತ್ತಷ್ಟು ಶಕ್ತಿ ತುಂಬಿದಂತಾಗಿದೆ’ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ಸಮೀಪದ ಉಡುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಮತಯಾಚನೆ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಅನೇಕ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು.
ಡಿ.ಟಿ.ಶ್ರೀನಿವಾಸ್, ಉಮೇಶ್, ಪಾಂಡುರಂಗಪ್ಪ, ತಮ್ಮಣ್ಣ, ರಾಮಣ್ಣ, ಜಯಣ್ಣ, ಮಂಜುನಾಥ್, ರಂಗನಾಥ್, ಚಿಕ್ಕಣ್ಣ, ಪ್ರಭಾಕರ್, ನಾಗವೇಣಿ, ಸುಶೀಲಮ್ಮ, ಜಯಮ್ಮ, ಶಾಂತಮ್ಮ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.