ADVERTISEMENT

ಮತದಾರರ ಪಟ್ಟಿ: ಕಾಂಗ್ರೆಸ್‌ ಅಭಿಯಾನ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2022, 6:15 IST
Last Updated 12 ಡಿಸೆಂಬರ್ 2022, 6:15 IST
ಮುರಳೀಧರ ಹಾಲಪ್ಪ
ಮುರಳೀಧರ ಹಾಲಪ್ಪ   

ಚಿತ್ರದುರ್ಗ: ಮತದಾರರ ಪಟ್ಟಿಯಿಂದ ಸಾವಿರಾರು ಜನರ ಹೆಸರನ್ನು ಕೈಬಿಡಲಾಗಿದೆ. ಉದ್ದೇಶ ಪೂರ್ವಕವಾಗಿ ಮಾಡಿದ ಈ ಪರಿಷ್ಕರಣೆಯನ್ನು ಸರಿಪಡಿಸಲು ಕಾಂಗ್ರೆಸ್‌ ವತಿಯಿಂದ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು.

‘ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 18 ಸಾವಿರಕ್ಕೂ ಅಧಿಕ ಮತದಾರರ ಹೆಸರನ್ನು ಕೈಬಿಡಲಾಗಿದೆ. ಹೀಗೆ ಕೈಬಿಟ್ಟ ಎಲ್ಲರೂ ನಿರ್ದಿಷ್ಟ ಸಮುದಾಯಕ್ಕೆ ಸೇರಿದವರು. ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ಅನ್ಯಮಾರ್ಗ ಅನುಸರಿಸುತ್ತಿದೆ. ಈ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಲಾಗುವುದು’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಡಿ.31ಕ್ಕೆ 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳ
ಬಹುದು. ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡುವುದರಿಂದ ಮತದಾರರಿಗೆ ಆಗುವ ಅನುಕೂಲಗಳ ಬಗ್ಗೆ ಜಾಗೃತಿ ಮೂಡಿಸಬೇಕಿದೆ’ ಎಂದು ವಿವರಿಸಿದರು.

ADVERTISEMENT

‘ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ವತಿಯಿಂದ ಪ್ರತಿ ಬೂತ್‌ಗೆ ಪ್ರತಿನಿಧಿಗಳನ್ನು ನೇಮಕ ಮಾಡಲಾಗುತ್ತಿದೆ. ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ ಮತದಾರರ ಹೆಸರು ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಪರಿಶೀಲಿಸಲಾಗುತ್ತದೆ. ಮತದಾರರ ಹೆಸರು ತಿದ್ದುಪಡಿ, ಸ್ಥಳ ಬದಲಾವಣೆ ಸೇರಿ ಇತರ ಮಾಹಿತಿಯನ್ನು ಮತದಾರರಿಗೆ ಪಕ್ಷದ ವತಿಯಿಂದ ನೀಡಲಾಗುವುದು’ ಎಂದು
ಹೇಳಿದರು.

ಚಿತ್ರದುರ್ಗ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಕಾರ್ಯಕಾರಿ ಸಮಿತಿ ಸದಸ್ಯ, ಖಂಜಾಚಿ, ವಕ್ತಾರ ಹಾಗೂ 35 ವಾರ್ಡ್‌ ಅಧ್ಯಕ್ಷರಿಗೆ ನೇಮಕಾತಿ ಪತ್ರವನ್ನು ವಿತರಿಸಲಾಯಿತು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ. ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ. ಹಾಲಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್. ಮೈಲಾರಪ್ಪ, ಕೆ.ಪಿ. ಸಂಪತ್‍ಕುಮಾರ್, ಮುಖಂಡರಾದ ಷಣ್ಮುಖಪ್ಪ, ಮೋಹನ್ ಪೂಜಾರಿ, ಯು.ಲಕ್ಷ್ಮೀಕಾಂತ್, ಆರ್. ಪ್ರಕಾಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.