ಸಾವು
(ಪ್ರಾತಿನಿಧಿಕ ಚಿತ್ರ)
ಚಳ್ಳಕೆರೆ: ತಾಲ್ಲೂಕಿನ ಪಾತಪ್ಪನಗುಡಿ ಗ್ರಾಮದಲ್ಲಿ ಶನಿವಾರ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಕುರಿಗಾಹಿಯೊಬ್ಬರು ಮೃತಪಟ್ಟಿದ್ದಾರೆ.
ಆಂಧ್ರಪ್ರದೇಶದ ಮಲೆನೂರು ಗ್ರಾಮದ ಪಾಮಜ್ಜ (35) ಅಸುನೀಗಿದವರು. ಪಾತಪ್ಪನಗುಡಿ ಗ್ರಾಮದ ನಿಂಗರಾಜ ಅವರ ಮನೆಯಲ್ಲಿ ಕುರಿ ಸಾಕಣೆಯಲ್ಲಿ ತೊಡಗಿಸಿಕೊಂಡಿದ್ದ ಅವರು ಬೆಳಿಗ್ಗೆ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೇ ತುಳಿದಿದ್ದರು. ವಿದ್ಯುತ್ ತಗುಲಿ ಗಾಯಗೊಂಡಿದ್ದ ಪಾಮಜ್ಜ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನ ಮೃತಪಟ್ಟಿದ್ದಾರೆ.
ಪರಶುರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.