ADVERTISEMENT

ಬೇಡಿಕೆ ಈಡೇರಿಕೆಗೆ ನೌಕರರ ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2020, 3:39 IST
Last Updated 4 ಅಕ್ಟೋಬರ್ 2020, 3:39 IST
ಚಳ್ಳಕೆರೆಯ ತಾಲ್ಲೂಕು ಕಚೇರಿ ಎದುರು ಶನಿವಾರ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರು ಮುಷ್ಕರ ನಡೆಸಿದರು
ಚಳ್ಳಕೆರೆಯ ತಾಲ್ಲೂಕು ಕಚೇರಿ ಎದುರು ಶನಿವಾರ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರು ಮುಷ್ಕರ ನಡೆಸಿದರು   

ಚಳ್ಳಕೆರೆ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆರೋಗ್ಯ ಇಲಾಖೆಯ ಗುತ್ತಿಗೆ ಮತ್ತು ಹೊರ ಗುತ್ತಿಗೆದಾರರ ಸಂಘದ ಕಾರ್ಯಕರ್ತರು ಶನಿವಾರ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದರು.

ಆರೋಗ್ಯ ಸಹಾಯಕಿ ಮಂಜುಶ್ರೀ, ‘ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರ ಗುತ್ತಿಗೆದಾರರಿಗೆ ಸರ್ಕಾರ ನೀಡುತ್ತಿರುವ ವೇತನ ಜೀವನ ನಿರ್ವಹಣೆಗೆ ಸಕಾಗುತ್ತಿಲ್ಲ. ಇದರಿಂದ ನೌಕರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲಸಕ್ಕೆ ಸಮಾನ ವೇತನ ನೀಡಬೇಕು. ಸೇವಾ ಭದ್ರತೆ ಒದಗಿಸಬೇಕು’ ಎಂದು ಆಗ್ರಹಿಸಿದರು.

ಆರ್.ರೇಖಾ, ‘ವರ್ಷಕ್ಕೆ ಕೇವಲ 10 ದಿನ ರಜೆ ಸೌಲಭ್ಯ ಕಲ್ಪಿಸಿ ಸರ್ಕಾರ ಗುತ್ತಿಗೆ ನೌಕರನ್ನು ವಂಚಿಸಿದೆ. ಯಾವುದೇ ವಿಶೇಷ ಭತ್ಯೆಯ ಸೌಲಭ್ಯ ಒದಗಿಸಿಲ್ಲ’ ಎಂದು ದೂರಿದರು.

ADVERTISEMENT

ಪಲ್ಲವಿ, ‘ವಿಶೇಷ ಆರೋಗ್ಯ ಸೌಲಭ್ಯ ಒದಗಿಸಬೇಕು. ವೇತನ ತಾರತಮ್ಯವನ್ನು ಹೋಗಲಾಡಿಸಿ ಹೊರಗುತ್ತಿಗೆ ನೌಕರ
ರನ್ನು ಸರ್ಕಾರಿ ನೌಕರರಂತೆ ಪರಿಗಣಿಸ
ಬೇಕು’ ಎಂದು ಮನವಿ ಮಾಡಿದರು.

ಬೇಡಿಕೆ ಈಡೇರುವವರೆಗೂ ಮುಷ್ಕರ ಹಿಂಪಡೆಯುವುದಿಲ್ಲ ಎಂದು ಧರಣಿ ನಿರತರು ಎಚ್ಚರಿಸಿದರು.

ಹೋರಾಟಗಾರ ಎಚ್.ಎಸ್. ಸೈಯದ್, ಕಾವ್ಯಾ, ವಿದ್ಯಾ, ಉಮಾ, ಶ್ವೇತಾ, ಅನಿತಾ ಮಾತನಾಡಿದರು.

ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ ಅವರಿಗೆ ಮನವಿ
ಸಲ್ಲಿಸಲಾಯಿತು.

ಶಿವಗಂಗಾ, ಜ್ಯೋತಿ, ಶಾಂತಾ, ಧನಲಕ್ಷ್ಮೀ, ಸರೋಜಮ್ಮ, ತಿಪ್ಪಮ್ಮ, ರೂಪಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.