ಹಿರಿಯೂರು: ನಗರದ ಲಯನ್ಸ್ ಕಣ್ಣಿನ ಆಸ್ಪತ್ರೆಯಲ್ಲಿ ಏ. 20ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಲಯನ್ಸ್ ಕ್ಲಬ್ ಹಾಗೂ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣ ಶಿಬಿರ ಹಮ್ಮಿಕೊಳ್ಳಲಾಗಿದೆ.
ಶಿಬಿರಕ್ಕೆ ಬರುವವರು ಕಡ್ಡಾಯವಾಗಿ ಇತ್ತೀಚಿನ 2 ಪಾಸ್ ಪೋರ್ಟ್ ಸೈಜ್ ಭಾವಚಿತ್ರ, ಪಡಿತರ ಕಾರ್ಡ್, ಆಧಾರ್ ಕಾರ್ಡ್ ನಕಲು ಮತ್ತು ಮತದಾನ ಗುರುತಿನ ಚೀಟಿ ಜೆರಾಕ್ಸ್ ಪ್ರತಿ ತರಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಶಸ್ತ್ರ ಚಿಕಿತ್ಸೆ ಅಗತ್ಯ ಇದ್ದವರನ್ನು ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಿ ಶಸ್ತ್ರ ಚಿಕಿತ್ಸೆ ನಂತರ ಮರಳಿ ಹಿರಿಯೂರಿಗೆ ಕರೆತಂದು ಬಿಡಲಾಗುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.