ಸಾವು
(ಪ್ರಾತಿನಿಧಿಕ ಚಿತ್ರ)
ಚಳ್ಳಕೆರೆ: ತಾನು ಸಾಕಿದ ಹೋರಿ ಇರಿದ ಪರಿಣಾಮ ರೈತ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಕರಿಕೆರೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ಕರಿಕೆರೆ ಗ್ರಾಮದ ರಾಜಪ್ಪ (60) ಮೃತ ರೈತ. ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಹೋರಿ ಇರಿದಿದ್ದು, ಗಂಭೀರ ಗಾಯಗೊಂಡ ಅವರನ್ನು ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.