ADVERTISEMENT

ರೈತರು ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ

ಶಾಸಕ ಟಿ. ರಘುಮೂರ್ತಿ ಸಲಹೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2023, 5:53 IST
Last Updated 15 ಜನವರಿ 2023, 5:53 IST
ಚಳ್ಳಕೆರೆ ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ರೈತರನ್ನು ಸನ್ಮಾನಿಸಲಾಯಿತು
ಚಳ್ಳಕೆರೆ ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ರೈತರನ್ನು ಸನ್ಮಾನಿಸಲಾಯಿತು   

ಚಳ್ಳಕೆರೆ: ಸಾಂಪ್ರದಾಯಿಕ ಹಾಗೂ ಆಧುನಿಕ ಕೃಷಿ ಪದ್ಧತಿ ವಿಧಾನದಿಂದ ಕೃಷಿ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕು. ಕೃಷಿ ಬದುಕಿನ ಬಗ್ಗೆ ರೈತರು ಎಂದಿಗೂ ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ಆಹಾರ ಧಾನ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಬೇಕು ಎಂದು ಶಾಸಕ ಟಿ. ರಘುಮೂರ್ತಿ ರೈತರಿಗೆ ಸಲಹೆ ನೀಡಿದರು.

ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮದಲ್ಲಿ ಜನಸೇವಾ ಟ್ರಸ್ಟ್ ಶನಿವಾರ ಹಮ್ಮಿಕೊಂಡಿದ್ದ ಸಾಂಪ್ರದಾಯಿಕ ಜಾನುವಾನು ವ್ಯವಸಾಯ ಮತ್ತು ರೈತರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ರೈತರು ಆರ್ಥಿಕವಾಗಿ ಸದೃಢರಾಗುವ ಮೂಲಕ ಸ್ವಾವಲಂಬನೆಯ ಜೀವನ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಜನಸೇವಾ ಟ್ರಸ್ಟ್ ಗೌರಾಧ್ಯಕ್ಷ ರಾಮಕೃಷ್ಣರೆಡ್ಡಿ, ಸಮಗ್ರ ಕೃಷಿ ಚಟುವಟಿಕೆಯ ಬಗ್ಗೆ ಸೂಕ್ತ ತರಬೇತಿ ನೀಡುವುದರ ಜತೆಗೆ ರೈತರಿಗೆ ಉಚಿತ ಬಿತ್ತನೆ ಬೀಜ, ಗೊಬ್ಬರ ವಿತರಿಸಬೇಕು ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು.

ಸೇವಾನಿರತ ಸಂಘಟನೆಗಳು ಒಗ್ಗೂಡುವ ಮೂಲಕ ಗ್ರಾಮಾಭಿವೃದ್ಧಿ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ತಿಂಗಳಿಗೊಮ್ಮೆ ಕೃಷಿ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಕೃಷಿ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.

ಪ್ರಗತಿಪರ ರೈತ ಏಕಾಂತಪ್ಪ, ತಂತ್ರಜ್ಞಾನಾಧಾರಿತ ಬೇಸಾಯದ ಕ್ರಮದ ತರಬೇತಿಯನ್ನು ತಪ್ಪದೆ ಪಡೆದುಕೊಳ್ಳಬೇಕು ಎಂದು ರೈತರಿಗೆ ಕಿವಿಮಾತು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಸ್ವಾಮಿ, ಜನಸೇವಾ ಟ್ರಸ್ಟ್ ಅಧ್ಯಕ್ಷ ಹರೀಶ್, ರೈತ ಮುಖಂಡ ಗೋವಿಂದರೆಡ್ಡಿ, ದೇವರಾಜರೆಡ್ಡಿ ಮಾತನಾಡಿದರು.

30 ಜನ ಪ್ರಗತಿಪರ ರೈತರನ್ನು‌ ಸನ್ಮಾನಿಸಲಾಯಿತು. ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರೇವಣ್ಣ, ಕೃಷಿ ಇಲಾಖೆ ಅಧಿಕಾರಿ ತಿಪ್ಪೇಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.