ADVERTISEMENT

7 ಕೋಟಿ ಕನ್ನಡಿಗರ ಹಬ್ಬ ದಸರಾ; ರಾಮಲಿಂಗಾರೆಡ್ಡಿ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2025, 18:22 IST
Last Updated 30 ಆಗಸ್ಟ್ 2025, 18:22 IST
ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿ   

ಹಿರಿಯೂರು (ಚಿತ್ರದುರ್ಗ ಜಿಲ್ಲೆ): ‘ಮೈಸೂರಿನಲ್ಲಿ ಆಚರಿಸುವ ದಸರಾ 7 ಕೋಟಿ ಕನ್ನಡಿಗರಿಗೆ ಸೇರಿದ ಹಬ್ಬ. ಬಿಜೆಪಿ ಮುಖಂಡರು ರಾಜಕೀಯ ಕಾರಣಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಜನರು ನೆಮ್ಮದಿಯಿಂದ ಇರುವುದು ಅವರಿಗೆ ಬೇಕಾಗಿಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟರು.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ದಸರಾ ಹಬ್ಬಕ್ಕೆ ಎಪಿಜೆ ಅಬ್ದುಲ್‌ ಕಲಾಂ ಅವರನ್ನು ಆಹ್ವಾನಿಸಿದ್ದರು. ಕವಿ ಕೆ.ಎಸ್‌. ನಿಸಾರ್‌ ಅಹಮದ್‌ ದಸರಾ ಉದ್ಘಾಟಿಸಿದ್ದರು. ಅವರು ಕುಂಕುಮ ಹಚ್ಚಿಕೊಂಡು ಬಂದಿದ್ದರೇ? ಚೇಷ್ಟೆ ಮಾಡದಿದ್ದರೆ ಬಿಜೆಪಿ ಮುಖಂಡರಿಗೆ ನಿದ್ದೆ ಬರುವುದಿಲ್ಲ. ಮುಸ್ಲಿಂ ಎನ್ನುವ ಕಾರಣಕ್ಕೆ ಬಾನು ಮುಷ್ತಾಕ್ ಅವರ ವಿರುದ್ಧ ಅಪಸ್ವರ ಎತ್ತುವುದು ಸರಿಯಲ್ಲ’ ಎಂದರು.

‘‌ಸರ್ಕಾರ ಬಿಜೆಪಿಯ ಒತ್ತಡಕ್ಕೆ ಮಣಿಯುವುದಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಈಗಾಗಲೇ ನಿರ್ಧಾರಿಸಿದ್ದು ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟಿಸಲಿದ್ದಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

‘ಚಾಮುಂಡೇಶ್ವರಿ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದೆ. ಅದು ಹಿಂದೂಗಳಿಗೆ ಸೇರಿದ ದೇವಾಲಯ ಎನ್ನುವುದರಲ್ಲಿ ಎರಡು ಮಾತಿಲ್ಲ. ಚಾಮುಂಡೇಶ್ವರಿ ಪ್ರಾಧಿಕಾರ ಅಧಿಕೃತವೋ, ಅಲ್ಲವೋ ಎಂಬುದನ್ನು ನ್ಯಾಯಾಲಯ ತೀರ್ಮಾನಿಸುತ್ತದೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.