ADVERTISEMENT

ಚಿತ್ರದುರ್ಗ | ಬೆಂಕಿಗೆ ಕುಟುಂಬ ಆಹುತಿ

​ಪ್ರಜಾವಾಣಿ ವಾರ್ತೆ
Published 2 ಜನವರಿ 2020, 4:10 IST
Last Updated 2 ಜನವರಿ 2020, 4:10 IST
   

ಚಿತ್ರದುರ್ಗ: ಇಲ್ಲಿನ ಗಾರೆಹಟ್ಟಿ ಬಡಾವಣೆಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಮೂವರು ಆಹುತಿಯಾಗಿದ್ದಾರೆ.

ಅರುಣ್ ಕುಮಾರ್ (43), ಪತ್ನಿ ಲತಾ (35) ಹಾಗೂ ಪುತ್ರಿ ಅಮೃತಾ (13) ಮೃತಪಟ್ಟವರು.

ಅಗ್ನಿ ದುರಂತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.