ADVERTISEMENT

ಚಿತ್ರದುರ್ಗ: ಬೈಕ್ ನಡುವೆ ಅಪಘಾತ, ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ ಲಾರಿ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2022, 14:06 IST
Last Updated 22 ಏಪ್ರಿಲ್ 2022, 14:06 IST
ಬೆಂಕಿಯಿಂದ ಸುಟ್ಟು ಕರಕಲಾಗಿರುವ ವಾಹನಗಳು
ಬೆಂಕಿಯಿಂದ ಸುಟ್ಟು ಕರಕಲಾಗಿರುವ ವಾಹನಗಳು   

ಚಿತ್ರದುರ್ಗ: ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಅಪಘಾತದಲ್ಲಿ ಲಾರಿಗೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಶುಕ್ರವಾರ ನಡೆದಿದೆ.

ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಲಾರಿ ಅಡಿಗೆ ಸಿಲುಕಿ ಬೆಂಕಿ ಹೊತ್ತಿಕೊಂಡಿದೆ. ಬೈಕ್ ಸವಾರ ಅಪಾಯದಿಂದ ಪಾರಾಗಿದ್ದಾರೆ.

ಬೆಂಕಿ ಹೊತ್ತಿಕೊಂಡ ಲಾರಿಯಲ್ಲಿ ಪೇಪರ್ ಇತ್ತು. ಹೀಗಾಗಿ ಜ್ವಾಲೆ ಬಹುಬೇಗ ವ್ಯಾಪಿಸಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸಿದರು ಎಂದು ಹಿರಿಯೂರು ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.