ADVERTISEMENT

ಆಕಸ್ಮಿಕ ಬೆಂಕಿ: 3 ಬಣವೆ ಭಸ್ಮ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 3:30 IST
Last Updated 20 ಏಪ್ರಿಲ್ 2021, 3:30 IST
ಚಳ್ಳಕೆರೆ ತಾಲ್ಲೂಕಿನ ಕುರುಡಿಹಳ್ಳಿ ಲಂಬಾಣಿಹಟ್ಟಿಯಲ್ಲಿ ಸೋಮವಾರ ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿನ ಬಣವೆ ಭಸ್ಮವಾಗಿದೆ.
ಚಳ್ಳಕೆರೆ ತಾಲ್ಲೂಕಿನ ಕುರುಡಿಹಳ್ಳಿ ಲಂಬಾಣಿಹಟ್ಟಿಯಲ್ಲಿ ಸೋಮವಾರ ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿನ ಬಣವೆ ಭಸ್ಮವಾಗಿದೆ.   

ಪ್ರಜಾವಾಣಿ ವಾರ್ತೆ

ಕುರುಡಿಹಳ್ಳಿ ಲಂಬಾಣಿಹಟ್ಟಿ (ಚಳ್ಳಕೆರೆ): ತಾಲ್ಲೂಕಿನ ಕುರುಡಿಹಳ್ಳಿ ಲಂಬಾಣಿಹಟ್ಟಿ ಗ್ರಾಮದಲ್ಲಿಸೋಮವಾರ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ರಾಮಾನಾಯ್ಕ, ಶಿವನಾಯ್ಕ ಹಾಗೂ ಗುರುಸ್ವಾಮಿ ನಾಯ್ಕ ಅವರಿಗೆ ಸೇರಿದ ರಾಗಿ ಮತ್ತು ಶೇಂಗಾ ಹುಲ್ಲಿನ 3 ಬಣವೆಗಳು ಸುಟ್ಟು ಭಸ್ಮವಾಗಿವೆ. ಇದರಿಂದ ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಬಣವೆಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಗ್ರಾಮಸ್ಥರು, ಅಗ್ನಿಶಾಮಕ ಠಾಣೆಗೆ ದೂರವಾಣಿ ಕರೆ ಮಾಡಿ ತಿಳಿಸಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸುವ ಮೂಲಕ ಸಂಭವಿಸಬಹುದಾದ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು.

ADVERTISEMENT

ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿ ಜಯಣ್ಣ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.