ADVERTISEMENT

ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 24 ಜುಲೈ 2022, 4:41 IST
Last Updated 24 ಜುಲೈ 2022, 4:41 IST
ಹೊಳಲ್ಕೆರೆಯ ಬಿಸಿಎಂ ವಿದ್ಯಾರ್ಥಿನಿಲಯದಲ್ಲಿ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.
ಹೊಳಲ್ಕೆರೆಯ ಬಿಸಿಎಂ ವಿದ್ಯಾರ್ಥಿನಿಲಯದಲ್ಲಿ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.   

ಹೊಳಲ್ಕೆರೆ: ಪಟ್ಟಣದ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ಹಾಸ್ಟೆಲ್‌ನಲ್ಲಿ ಶುಕ್ರವಾರ ರಾತ್ರಿ ಊಟ ಸೇವಿಸಿದ 10 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರು.

ಸಂಜೆ ಮಂಡಕ್ಕಿ, ಮೆಣಸಿನ ಕಾಯಿ ಬೋಂಡಾ ಸೇವಿಸಿದ ವಿದ್ಯಾರ್ಥಿನಿಯರು ರಾತ್ರಿ ಪಾಯಸ, ಅನ್ನ ಸಾಂಬಾರ್ ಊಟ ಮಾಡಿದ್ದರು. ನಂತರ ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು ಕಾಣಿಸಿಕೊಂಡು ವಾಂತಿ ಮಾಡಿಕೊಂಡರು. ತಕ್ಷಣವೇ ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಇಬ್ಬರು ವಿದ್ಯಾರ್ಥಿನಿಯರನ್ನು ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಯಿತು. ಪಟ್ಟಣದ ಆಸ್ಪತ್ರೆಗೆ ದಾಖಲಿಸಿದ್ದ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಕೊಡಿಸಿ ವಿದ್ಯಾರ್ಥಿನಿಲಯಕ್ಕೆ ವಾಪಸ್ ಕಳುಹಿಸಲಾಗಿದೆ.

‘ಗ್ಯಾಸ್ಟ್ರಿಕ್ ಸಮಸ್ಯೆ ಹಾಗೂ ವಿದ್ಯಾರ್ಥಿನಿಯರ ವೈಯಕ್ತಿಕ ಆರೋಗ್ಯ ಸಮಸ್ಯೆಯಿಂದಾಗಿ ಅಸ್ವಸ್ಥರಾಗಿದ್ದರು. ಈಗ ಎಲ್ಲಾ ವಿದ್ಯಾರ್ಥಿನಿಯರು ಆರೋಗ್ಯವಾಗಿದ್ದಾರೆ’ ಎಂದು ಬಿಸಿಎಂ ಕಲ್ಯಾಣಾಧಿಕಾರಿ ಪ್ರದೀಪ್ ಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.