ADVERTISEMENT

ಚಿಪ್ಪುಹಂದಿ ಬೇಟೆ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2022, 11:10 IST
Last Updated 27 ನವೆಂಬರ್ 2022, 11:10 IST
ಚಿತ್ರದುರ್ಗ ತಾಲ್ಲೂಕಿನಲ್ಲಿ ಚಿಪ್ಪುಹಂದಿ ಬೇಟೆಯಾಡಿ ಹೊರರಾಜ್ಯಕ್ಕೆ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ ಚಿಪ್ಪುಹಂದಿ ಬೇಟೆಯಾಡಿ ಹೊರರಾಜ್ಯಕ್ಕೆ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.   

ಚಿತ್ರದುರ್ಗ: ಚಿಪ್ಪುಹಂದಿ ಬೇಟೆಯಾಡಿ ಚಿಪ್ಪುಗಳನ್ನು ಹೊರರಾಜ್ಯಕ್ಕೆ ಸಾಗಣೆ ಮಾಡುತ್ತಿದ್ದ ಆರೋಪದ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಇಬ್ಬರನ್ನು ಬಂಧಿಸಿದ್ದಾರೆ.

ತಾಲ್ಲೂಕಿನ ದೊಡ್ಡಪುರ ಗ್ರಾಮದ ರಾಮಪ್ಪ (64) ಹಾಗೂ ಯೋಗೇಶ್‌ (35) ಬಂಧಿತರು. ಆರೋಪಿಗಳಿಂದ ಚಿಪ್ಪುಹಂದಿಯ ಒಂದೂವರೆ ಕೆ.ಜಿ ಚಿಪ್ಪು, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವನ್ಯಜೀವಿ ಅಪರಾಧ ನಿಯಂತ್ರಣ ವಿಭಾಗದ ಮಾಹಿತಿಯ ಮೇರೆಗೆ ವಲಯ ಅರಣ್ಯಾಧಿಕಾರಿ ಜಿ.ಎಸ್‌. ಸಂದೀಪ ನಾಯಕ ನೇತೃತ್ವದ ತಂಡ ಬುರುಜನರೊಪ್ಪದ ಸಮೀಪ ಕಾರ್ಯಾಚರಣೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅಳವಿನಂಚಿನಲ್ಲಿರುವ ಚಿಪ್ಪುಹಂದಿಯನ್ನು ಬೇಟೆಯಾಡಿ ಹೊರರಾಜ್ಯಕ್ಕೆ ಸಾಗಣೆ ಮಾಡುತ್ತಿದ್ದದು ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.