ಆರ್.ರಾಮಯ್ಯ
ಚಿತ್ರದುರ್ಗ: ಹಿರಿಯೂರು ಕ್ಷೇತ್ರದ ಮಾಜಿ ಶಾಸಕ ಆರ್.ರಾಮಯ್ಯ (79) ಬುಧವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
1985ರಲ್ಲಿ ನಡೆದ ವಿಧಾನಸಭಾ ಮರು ಚುನಾವಣೆಯಲ್ಲಿ ರಾಮಯ್ಯ ಶಾಸಕರಾಗಿ ಆಯ್ಕೆಯಾಗಿದ್ದರು. 2013ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. ನಂತರ ಅವರು ಸಕ್ರಿಯ ರಾಜಕಾರಣದಿಂದ ದೂರ ಉಳಿಸಿದ್ದರು.
ಅವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ. ಹಿರಿಯೂರು ತಾಲ್ಲೂಕಿನ ಭೀಮನಬಂಡೆ ಸಮೀಪ ಇರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.